Breaking News

ಹಿಪ್ಪರಗಿ ಗ್ರಾಮದಲ್ಲಿ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ಗ್ರಾಮಸ್ಥರು,‌ ಕನ್ನಡಪರ‌ ಸಂಘಟನೆಗಳು ಘೇರಾವ್

Spread the love

ಅಥಣಿ: ತಾಲ್ಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ಗ್ರಾಮಸ್ಥರು,‌ ಕನ್ನಡಪರ‌ ಸಂಘಟನೆಗಳು ಘೇರಾವ್ ಹಾಕಿದ ಘಟನೆ ನಡೆದಿದೆ.

ಹಿಪ್ಪರಗಿ ಬ್ಯಾರೇಜ್ ಸಂಪರ್ಕ ಕಲ್ಲಿಸುವ‌ ರಸ್ತೆ ಕಾಮಗಾರಿಗೆ ಭೂಮಿ ಪೂಜೆ‌ ನೆರವೇರಿಸಲು ಆಗಮಿಸುತ್ತಿದ್ದರು.ಈ ವೇಳೆ ರಸ್ತೆಯ ಮಧ್ಯದಲ್ಲಿಯೇ ಗ್ರಾಮಸ್ಥರು, ಕನ್ನಡಪರ ಹೋರಾಟಗಾರರು ಘೇರಾವ್ ಹಾಕುವ ಮೂಲಕ ಸಮಸ್ಯೆಗಳನ್ನು ಆಲಿಸುವಂತೆ ಪಟ್ಟು ಹಿಡಿದರು.

ಹಿಪ್ಪರಗಿ, ನಂದೇಶ್ವರ ಗ್ರಾಮದಲ್ಲಿ ಮೂಲ ಸೌಕರ್ಯ ಸೇರಿದಂತೆ ಅನೇಕ ಸಮಸ್ಯೆಗಳನ್ನು ಜನರು ಅನುಭವಿಸುತ್ತಿದ್ದಾರೆ. ಚುನಾವಣೆ ಬಳಿಕ ಶಾಸಕರು ಭೇಟಿ ನೀಡಿ ಜನರ ಸಮಸ್ಯೆಯನ್ನು ಆಲಿಸಿಲ್ಲ. ಈಗ ಗ್ರಾಮಕ್ಕೆ ಭೇಟಿ ನೀಡಬೇಕು. ಜನರ ಸಮಸ್ಯೆ ಆಲಿಸುವ ಮೂಲಕ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ರಸ್ತೆ ಕಾಮಗಾರಿ ಭೂಮಿ ಪೂಜೆಗೆ ಆಗಮಿಸಿದ್ದ ಶಾಸಕರು ಮಾರ್ಗ ಬದಲಾಯಿಸಿ ನಂದೇಶ್ವರ ಗ್ರಾಮಕ್ಕೆ ಭೇಟಿ ಸಮಸ್ಯೆಗಳನ್ನು ಆಲಿಸಿದರು. ಜತೆಗೆ ಕಳೆದ ವರ್ಷದ ಅತಿವೃಷ್ಠಿ ಹಾಗೂ ಪ್ರವಾಹದಿಂದ ಆಗಿರುವ ಸಮಸ್ಯೆ ಬಗ್ಗೆ ಅಳಲು ತೊಡಿಕೊಂಡರು. ತಕ್ಷಣ ಪರಿಹಾರ ಸರ್ಕಾರದಿಂದ ಕೊಡಿಸಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ