Breaking News

ನಿರ್ಮಾಪಕರ ವಿರುದ್ಧ ಮಾನಹಾನಿ ಆರೋಪ ಕೇಸ್; ಕೋರ್ಟ್‌ನಲ್ಲಿ ಹೇಳಿಕೆ ದಾಖಲಿಸಿದ ನಟ ಸುದೀಪ್

Spread the love

ಬೆಂಗಳೂರು : ಚಿತ್ರ ನಿರ್ಮಾಪಕ ಎಂ.ಎನ್.ಕುಮಾರ್ ಮತ್ತು ಎಂ.ಎನ್.ಸುರೇಶ್ ಅವರ ವಿರುದ್ಧ ಮಾನಹಾನಿ ದಾವೆ ದಾಖಲಿಸಬೇಕು ಹಾಗೂ 10 ಸಾವಿರ ರೂಪಾಯಿ ದಂಡ ಪಾವತಿಸಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಖಾಸಗಿ ದೂರಿನ ಸಂಬಂಧ ನಟ ಸುದೀಪ್ ಅವರ ಪ್ರಮಾಣೀಕೃತ ಹೇಳಿಕೆಯನ್ನು ಬೆಂಗಳೂರಿನ ಎಸಿಎಂಎಂ ನ್ಯಾಯಾಲಯ ಇಂದು ದಾಖಲಿಸಿಕೊಂಡಿದೆ.

 

ಎಂ.ಎನ್.ಕುಮಾರ್ ಮತ್ತು ಎಂ.ಎನ್.ಸುರೇಶ್ ಅವರು ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ಮತ್ತು ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಸುದೀಪ್ ದಾಖಲಿಸಿರುವ ಖಾಸಗಿ ದೂರಿನ ವಿಚಾರಣೆ ನಡೆಸಿದ 13ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ವೆಂಕಣ್ಣ ಬಸಪ್ಪ ಹೊಸಮನಿ ಆದೇಶ ಕಾಯ್ದಿರಿಸಿದರು.

ನ್ಯಾಯಾಲಯದ ಹಿಂದಿನ ನಿರ್ದೇಶನದಂತೆ ತಮ್ಮ ವಕೀಲರೊಂದಿಗೆ ಗುರುವಾರ ವಿಚಾರಣೆಗೆ ಹಾಜರಾದ ಸುದೀಪ್, ಎಂ.ಎನ್.ಕುಮಾರ್ ಮತ್ತು ಎಂ.ಎನ್.ಸುರೇಶ್ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಮನೆ ಕಟ್ಟಲು ತಮಗೆ ಹಣದ ನೆರವು ನೀಡಿರುವುದಾಗಿ ಸುದ್ದಿಗೋಷ್ಠಿ ನಡೆಸಿ ಸುಳ್ಳು ಹೇಳಿದ್ದಾರೆ. ಇದರಿಂದ ಹಲವರು ತಮ್ಮನ್ನು ಪ್ರಶ್ನೆ ಮಾಡಿದ್ದಾರೆ. ಈ ಮೂಲಕ 22 ವರ್ಷಗಳಿಂದ ಚಿತ್ರರಂಗದಲ್ಲಿ ಕಷ್ಟಪಟ್ಟು ಗಳಿಸಿದ್ದ ಹೆಸರು ಹಾಗೂ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂಬುದೂ ಸೇರಿದಂತೆ ಖಾಸಗಿ ದೂರಿನಲ್ಲಿ ಉಲ್ಲೇಖಿಸಿರುವ ವಿಚಾರಗಳ ಬಗ್ಗೆ ಪ್ರಮಾಣೀಕೃತ ಹೇಳಿಕೆ ದಾಖಲಿಸಿ, ಕೆಲವೊಂದು ದಾಖಲೆ ಒದಗಿಸಿದ್ದಾರೆ.

 


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ