Breaking News

ಕೌಟುಂಬಿಕ ಕಲಹ.. ಮನನೊಂದು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

Spread the love

ರಾಯಚೂರು : ಕೌಟುಂಬಿಕ ಕಲಹದಿಂದ ಮನನೊಂದು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಮ್ಯಾಗಳಪೇಟೆಯಲ್ಲಿ ನಡೆದಿದೆ.

ಮೃತರನ್ನು ಚೌಡಮ್ಮ(26), 4 ಹಾಗೂ 2 ವರ್ಷದ ಕಂದಮ್ಮಗಳು ಎಂದು ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಮುದಗಲ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪತಿ ಹುಲಿಗೆಪ್ಪ ಹಾಗೂ ಪತ್ನಿ ಚೌಡಮ್ಮ ಇಬ್ಬರ ಮಧ್ಯೆ ಮನೆಯಲ್ಲಿ ಜಗಳ ನಡೆದಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕಾಗಮಿಸಿರುವ ಮುದಗಲ್ ಪೊಲೀಸರು ಮೃತ ದೇಹಗಳನ್ನು ಹೊರ ತೆಗೆದು ಘಟನಾ ಸ್ಥಳದಲ್ಲಿ ಇರಿಸಿದ್ದಾರೆ. ಚೌಡಮ್ಮನ ಅಣ್ಣ ಸ್ಥಳಕ್ಕೆ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಅನಮೋಡ ಘಾಟ್ ರಸ್ತೆಯಲ್ಲಿ ಭೂಕುಸಿತ!!!

Spread the love ಅನಮೋಡ ಘಾಟ್ ರಸ್ತೆಯಲ್ಲಿ ಭೂಕುಸಿತ!!! ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಖಾನಾಪೂರ ತಾಲೂಕಿನ ಅನಮೋಡ್ ಘಾಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ