Breaking News

ಅನಧಿಕೃತ ಶಾಲೆ, ತರಗತಿ, ಪಠ್ಯಕ್ರಮಕ್ಕೆ ಆ. 14ರೊಳಗೆ ಬ್ರೇಕ್ ಹಾಕಿ.. ಡಿಡಿಪಿಐಗಳಿಗೆ ಶಿಕ್ಷಣ ಇಲಾಖೆ ಸೂಚನೆ

Spread the love

ಬೆಂಗಳೂರು : ರಾಜ್ಯದಲ್ಲಿ ನೋಂದಣಿ ಮಾಡದೆ ಅನಧಿಕೃತವಾಗಿ ಶಾಲೆ ನಡೆಸುತ್ತಿರುವುದು, ತರಗತಿಗಳನ್ನು ನಡೆಸುತ್ತಿರುವುದು, ಅನಧಿಕೃತ ಪಠ್ಯಕ್ರಮ ಬೋಧನೆ, ಕೇಂದ್ರ ಪಠ್ಯಕ್ರಮಕ್ಕೆ ಸಂಯೋಜಿಸಿದ ನಂತರವೂ ರಾಜ್ಯ ಪಠ್ಯಕ್ರಮದಲ್ಲಿ ಶಾಲೆ ನಡೆಸುತ್ತಿರುವುದನ್ನು ನಿಯಂತ್ರಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಸಂಬಂಧ ಆಗಸ್ಟ್ 14ರ ವರೆಗೆ ಅಧಿಕಾರಿಗಳಿಗೆ ಗಡುವು ನೀಡಲಾಗಿದ್ದು, ಆಗಸ್ಟ್​​ 16ರೊಳಗೆ ವರದಿಯನ್ನು ಸಲ್ಲಿಕೆ ಮಾಡುವಂತೆ ಸೂಚಿಸಲಾಗಿದೆ. ವರದಿ ಸಲ್ಲಿಕೆ ಮಾಡದೇ ಇದ್ದಲ್ಲಿ ಸಂಬಂಧಪಟ್ಟ ಜಿಲ್ಲಾ ಉಪನಿರ್ದೇಶಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿನ ಕೆಲವು ಖಾಸಗಿ ಶಾಲಾ ಆಡಳಿತ ಮಂಡಳಿಗಳು ಕರ್ನಾಟಕ ಶಿಕ್ಷಣ ಕಾಯ್ದೆ 1983 ಸೆಕ್ಷನ್ 30, 31ರ ಪ್ರಕಾರ ಇಲಾಖಾ ವತಿಯಿಂದ ಯಾವುದೇ ನೋಂದಣಿಯನ್ನು ಪಡೆಯದೆ ಕಾರ್ಯ ನಿರ್ವಹಿಸುತ್ತಿವೆ. ಆಯಾ ಜಿಲ್ಲೆಗಳಲ್ಲಿ ನೋಂದಣಿಯನ್ನು ಪಡೆಯದೆ ಅನಧಿಕೃತವಾಗಿ ಶಾಲೆ ನಡೆಸುತ್ತಿರುವುದು, ಕೇಂದ್ರ ಪಠ್ಯಕ್ರಮಕ್ಕೆ ಸಂಯೋಜಿಸಿದ ನಂತರವೂ ರಾಜ್ಯ ಪಠ್ಯಕ್ರಮದಲ್ಲಿ ಶಾಲೆ ನಡೆಸುತ್ತಿರುವುದು ನಿಯಮಬಾಹಿರವಾಗಿದೆ.

ಈ ಸಂಬಂಧ ಶಾಲಾ ಆಡಳಿತ ಮಂಡಳಿಗಳಿಗೆ 45 ದಿನಗಳ ಸಮಯಾವಕಾಶ ನೀಡಿ 2023-24ನೇ ಶೈಕ್ಷಣಿಕ ಸಾಲಿನ ದಾಖಲಾತಿ ಪ್ರಾರಂಭವಾಗುವ ಮುನ್ನವೇ ತಕ್ಷಣ ನಿಯಮಾನುಸಾರ ಕ್ರಮ ವಹಿಸುವಂತೆ ಮತ್ತು ನಂತರದಲ್ಲಿ ಹಳೆಯ ಪದ್ಧತಿಯಲ್ಲೇ ಶಿಕ್ಷಣ ಮುಂದುವರೆಸಿದ್ದಲ್ಲಿ ಅಂತಹ ಶಾಲೆಗಳಿಗೆ ಪೋಷಕರು ಮಕ್ಕಳನ್ನು ದಾಖಲಿಸದಂತೆ ಜಾಗೃತಿ ಮೂಡಿಸಲು ಸೂಚಿಸಲಾಗಿತ್ತು. ಆದರೂ ರಾಜ್ಯದಲ್ಲಿ ಅನಧಿಕೃತ ಶಾಲೆಗಳಿಗೆ ಸಂಬಂಧಪಟ್ಟಂತೆ ಮಾಧ್ಯಮಗಳಲ್ಲಿ 1300 ಅನಧಿಕೃತ ಶಾಲೆಗಳಿದ್ದರೂ ಇಲಾಖೆ ಕ್ರಮ ವಹಿಸಿಲ್ಲ ಎನ್ನುವ ವರದಿ ಬಂದಿದೆ. ಹಾಗಾಗಿ ಕೂಡಲೇ ಆಯಾ ಜಿಲ್ಲೆಗಳಲ್ಲಿ ಸರ್ಕಾರದ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ