Breaking News

ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 9 ಮಂದಿ ಸಾವು!

Spread the love

ಗುಜರಾತ್​: ಅಹಮದಾಬಾದ್‌ನ ಬಾವ್ಲಾ-ಬಗೋದ್ರಾ ಹೆದ್ದಾರಿಯಲ್ಲಿ ಕಳೆದ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿತು. ಕನಿಷ್ಠ 10 ಜನರು ಮೃತಪಟ್ಟಿದ್ದು, 13 ಜನರು ಗಾಯಗೊಂಡಿದ್ದಾರೆ.

ಲಾರಿಯ ಹಿಂಬದಿಗೆ ಮಿನಿ ಟ್ರಕ್ ಡಿಕ್ಕಿ ಹೊಡೆದು ಘಟನೆ ನಡೆದಿದೆ.

ಈಟಿವಿ ಭಾರತದೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅಹಮದಾಬಾದ್ ಜಿಲ್ಲಾ ಎಸ್ಪಿ ಅಮಿತ್ ಕುಮಾರ್ ವಾಸವ, ”ರೈತ ಕುಟುಂಬವೊಂದು ದೇವರ ದರ್ಶನ ಮುಗಿಸಿ ಮಿನಿ ಟ್ರಕ್‌ನಲ್ಲಿ ಕಳೆದ ರಾತ್ರಿ 12 ಗಂಟೆ ಸುಮಾರಿಗೆ ತಮ್ಮ ಗ್ರಾಮದತ್ತ ಹಿಂದಿರುಗುತ್ತಿತ್ತು. ಈ ವೇಳೆ ರಸ್ತೆ ಬಳಿ ನಿಂತಿದ್ದ ಲಾರಿಯೊಂದಕ್ಕೆ ಟ್ರಕ್ ಹಿಂದಿನಿಂದ ಬಂದು ಡಿಕ್ಕಿ ಹೊಡೆಯಿತು. ಪರಿಣಾಮ, 10 ಜನ ಸ್ಥಳದಲ್ಲೇ ಮೃತಪಟ್ಟರು. ಮೃತರಲ್ಲಿ ಐವರು ಮಹಿಳೆಯರು, ಮೂವರು ಮಕ್ಕಳು ಮತ್ತು ಇಬ್ಬರು ಪುರುಷರಿದ್ದಾರೆ. ಮೃತಪಟ್ಟ 10 ಜನರಲ್ಲಿ 9 ಮಂದಿ ಒಂದೇ ಕುಟುಂಬದವರೆಂಬ ಮಾಹಿತಿ ಇದೆ. ಗಾಯಾಳುಗಳನ್ನು ಬಾಗೋದರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇತರ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ” ಎಂದರು.

 

 

ಪರಿಹಾರ ಘೋಷಣೆ: ಘಟನೆಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ. ”ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ ತಲಾ 50,000 ರೂ. ನೀಡಲಾಗುವುದು” ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ