ಬೆಂಗಳೂರು: ಆನೆದಂತ (Elephant Ivory) ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಆರ್ಎಂಸಿ ಯಾರ್ಡ್ ಪೊಲೀಸರು (Police) ಬಂಧಿಸಿದ್ದಾರೆ. ಶ್ರೀಶೈಲ ಬಂಧಿತ ಆರೋಪಿ. ಆರೋಪಿ ಶ್ರೀಶೈಲ್ ಗುರುವಾರ ಸಂಜೆ 6.30 ರ ಸುಮಾರಿಗೆ ಆರ್ಎಂಸಿ ಯಾರ್ಡ್ ಠಾಣಾ ವ್ಯಾಪ್ತಿಯ ಕೈಗಾರಿಕಾ ಪ್ರದೇಶದಲ್ಲಿ ಆನೆ ದಂತ ಮಾರಾಟಕ್ಕೆ ಯತ್ನಿಸುತ್ತಿದ್ದನು. ಈ ಬಗ್ಗೆ ಆರ್ಎಂಸಿ ಯಾರ್ಡ್ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಕೂಡಲೆ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನಿಂದ 7.42 ಕೆಜಿ ತೂಕದ 5 ಆನೆ ದಂತಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ನು ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.