Breaking News

ಮಂಗನ ಕೈಗೆ ಮಾಣಿಕ್ಯ ಕೊಟ್ಟರೆ ಏನಾಗುತ್ತದೆ ಎನ್ನುವ ಗಾದೆಗೆ ಬಿಜೆಪಿ ರಾಜ್ಯಾಧ್ಯಕ್ಷ ಕಾಮಿಡಿ ಆಕ್ಟರ್ ನಳಿನ್ ಕುಮಾರ್ ಕಟೀಲು ಸಾಕ್ಷಿ:.ಕಾಂಗ್ರೆಸ್

Spread the love

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ನಿರಂತರ ಹೇಳಿಕೆ ನೀಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಕಾಂಗ್ರೆಸ್ ಅಧಿಕೃತ ಟ್ವೀಟ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದೆ.

ಮಂಗನ ಕೈಗೆ ಮಾಣಿಕ್ಯ ಕೊಟ್ಟರೆ ಏನಾಗುತ್ತದೆ ಎನ್ನುವ ಗಾದೆಗೆ ಬಿಜೆಪಿ ರಾಜ್ಯಾಧ್ಯಕ್ಷ ಕಾಮಿಡಿ ಆಕ್ಟರ್ ನಳಿನ್ ಕುಮಾರ್ ಕಟೀಲು ಸಾಕ್ಷಿ. ಇವರ ಮಾತಲ್ಲಿ ಘನತೆ, ಗೌರವ, ಬದ್ಧತೆ, ಯಾವುದೂ ಇಲ್ಲ. ಸಿದ್ದರಾಮಯ್ಯರಿಗೆ ಕಾಂಗ್ರೆಸ್ ನಲ್ಲಿ ಬೆಲೆ ಇಲ್ಲ ಎಂದು ಅವರು ಹೇಳಿಕೆ ನೀಡಿದ್ದಾರೆ. ಆದರೆ ಸರ್ವ ಜನಾಂಗದ ನಾಯಕ, ಹಣಕಾಸು ತಜ್ಞ, 168 ಯೋಜನೆಗಳನ್ನು ಘೋಷಿಸಿ ಜಾರಿಗೊಳಿಸಿ ನುಡಿದಂತೆ ನಡೆದ ನಾಯಕ ಸಿದ್ದರಾಮಯ್ಯ ಎಂದು ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ.

ಒಂದು ಪಂಪ್ ವೆಲ್ ಮೇಲ್ಸೇತುವೆಯನ್ನು ಸಮಯಕ್ಕೆ ಮುಗಿಸಲಾಗದ ನಳಿನ್ ಕುಮಾರ್ ಕಟೀಲು ಅವರಿಗೆ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ. ನಮ್ಮ ಪ್ರತಿ ಕಾರ್ಯಕರ್ತರಲ್ಲೂ ಸಿದ್ದರಾಮಯ್ಯನವರ ಬಗ್ಗೆ ಅದಮ್ಯವಾದ ಗೌರವವಿದೆ.

ನಳಿನ್ ಕುಮಾರ್ ಕಟೀಲು ಅವರೇ, ಪದೇ ಪದೇ ಅವಹೇಳನ ಮಾಡುತ್ತಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕನಿಷ್ಠ ನೋಟಿಸನ್ನೂ ಕೊಡದಿದ್ದಿದ್ದು, ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಮುಖ್ಯಮಂತ್ರಿ ಭೇಟಿಗೆ ಸಣ್ಣ ಸಮಯ ಕೊಡದಿದ್ದಿದ್ದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿಯಲ್ಲಿ ಯಾವ ಪಾಡಿನಲ್ಲಿದ್ದಾರೆ ಎಂದು ಸೂಚಿಸುತ್ತದೆ. ಪಕ್ಷ ಕಟ್ಟಿದ ಅವರನ್ನ ಚೆನ್ನಾಗಿ ನೋಡಿಕೊಳ್ಳಿ ಎಂದು ಕಾಂಗ್ರೆಸ್ ಸಲಹೆ ನೀಡಿದೆ.

ನಳಿನ್ ಕುಮಾರ್ ಕಟೀಲು ತಮ್ಮ ನಡೆ-ನುಡಿ ಮೂಲಕ ತಾನೊಬ್ಬ ಅಪ್ರಬುದ್ಧ, ಅನಾಗರಿಕ, ಸಡಿಲ ನಾಲಿಗೆಯ ಯಕಶ್ಚಿತ್ ರಾಜಕಾರಣಿ ಎಂದು ಮತ್ತೆ ಮತ್ತೆ ಸಾಬೀತು ಮಾಡುತ್ತಿದ್ದಾರೆ. ರಾಜ್ಯ ಬಿಜೆಪಿಯ ಮಾನ ಹರಾಜು ಹಾಕಲು ನಳಿನ್ ಕುಮಾರ್ ಕಟೀಲ್ ಒಬ್ಬರೇ ಸಾಕು. ಅವರು ಇದೇ ರೀತಿ ಮಾತನಾಡುತ್ತಾ ಬಿಜೆಪಿಯ ಬಣ್ಣ ಬಯಲು ಮಾಡುತ್ತಲೇ ಇರಲಿ ಎಂದು ಟ್ವೀಟ್ ಮಾಡಿ ಕಿಡಿಕಾರಿದೆ

Spread the love

About Laxminews 24x7

Check Also

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

Spread the loveಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ