ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆ ಸಮೀಪದಲ್ಲಿರುವಾಗಲೇ ಕೆಲ ಕಿಡಿಗೇಡಿಗಳು ಬೆಂಗಳೂರಿನ ಹೋಟೆಲ್ ಟಾರ್ಗೆಟ್ ಮಾಡಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ.
ಪ್ರತಿಷ್ಠಿತ ಐಶಾರಾಮಿ ಹೋಟೆಲ್ಗಳಲ್ಲಿ ಒಂದಾದ ಶಾಂಗ್ರೀಲಾಗೆ ಬಾಂಬ್ ಬೆದರಿಕೆ ಇ-ಮೇಲ್ ರವಾನಿಸಲಾಗಿದೆ.
ಬೆಂಗಳೂರಿನ ಶಾಂಗ್ರೀಲಾ ಹೋಟೆಲ್ ಸೇರಿ ದೇಶದ ಎಲ್ಲಾ ಬ್ರಾಂಚ್ಗೂ ಬಾಂಬ್ ಬೆದರಿಕೆ ಹಾಕಿದ್ದಾರೆ. luisamaclare@proton.me ಎಂಬ ಇ -ಮೇಲ್ ಐಡಿ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಎಲ್ಲ ಬ್ರಾಂಚ್ಗಳಲ್ಲೂ ಬಾಂಬ್ ಇಟ್ಟಿರೋದಾಗಿ ತಿಳಿಸಿದ್ದಾರೆ. ಬೆದರಿಕೆ ಸಂದೇಶ ಬಂದ ತಕ್ಷಣವೇ ಹೋಟೆಲ್ ಸಿಬ್ಬಂದಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಪೊಲೀಸರು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ.