Breaking News
Home / ರಾಜಕೀಯ / ಬಿಡುಗಡೆಗೂ ಮುನ್ನವೇ ದಾಖಲೆ ಬರೆದ ‘ಪುಷ್ಪ 2’

ಬಿಡುಗಡೆಗೂ ಮುನ್ನವೇ ದಾಖಲೆ ಬರೆದ ‘ಪುಷ್ಪ 2’

Spread the love

2021ರಲ್ಲಿ ತೆರೆ ಕಂಡು ವಿಶ್ವದಾದ್ಯಂತ ಧೂಳೆಬ್ಬಿಸಿದ್ದ ‘ಪುಷ್ಪ: ದಿ ರೈಸ್’​ನ ಮುಂದುವರೆದ ಭಾಗ ಇದಾಗಿದೆ. ನಟ ಅಲ್ಲು ಅರ್ಜುನ್​ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರದ ಮೇಲೆ ಮುಗಿಲೆತ್ತರದ ನಿರೀಕ್ಷೆಯಿದೆ. ಈಗಾಗಲೇ ಚಿತ್ರದ ಫಸ್ಟ್​ ಲುಕ್​ ಪೋಸ್ಟರ್ ಬಿಡುಗಡೆಯಾಗಿದ್ದು, ದಾಖಲೆಯನ್ನು ಸೃಷ್ಟಿಸಿದೆ.

ಇತಿಹಾಸದಲ್ಲಿ ಇದೇ ಮೊದಲು.. ಏಪ್ರಿಲ್​ 8 ರಂದು ಪುಷ್ಪ 2 ಚಿತ್ರದ ಫಸ್ಟ್​ ಲುಕ್​ ಪೋಸ್ಟರ್​ ಅನ್ನು ಚಿತ್ರತಂಡ ಬಿಡುಗಡೆಗೊಳಿಸಿತ್ತು. ಈ ಪೋಸ್ಟರ್​ 4 ತಿಂಗಳಲ್ಲಿ ಸಾಮಾಜಿಕ ಜಾಲತಾಣವಾದ ಇನ್​ಸ್ಟಾಗ್ರಾಮ್​ನಲ್ಲಿ 7 ಮಿಲಿಯನ್​ ಲೈಕ್ಸ್​ಗಳನ್ನು ಪಡೆಯುವ ಮೂಲಕ ದಾಖಲೆಯನ್ನು ಬರೆದಿದೆ. ಈ ವಿಚಾರವನ್ನು ಚಿತ್ರ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್​ ಟ್ವೀಟರ್​ನಲ್ಲಿ ಹಂಚಿಕೊಂಡಿದೆ. ಇನ್​ಸ್ಟಾಗ್ರಾಮ್​ನಲ್ಲಿ ಇಷ್ಟು ಮಿಲಿಯನ್​ ಲೈಕ್ಸ್​ಗಳನ್ನು ಪಡೆದ ಮೊದಲ ಭಾರತೀಯ ಸಿನಿಮಾ ಪೋಸ್ಟರ್​ ಇದಾಗಿದೆ. ಈ ಬಗ್ಗೆ ಅಲ್ಲು ಅಭಿಮಾನಿಗಳು ಖುಷಿಯಾಗಿದ್ದಾರೆ.

 

ಫಹಾದ್​ ಫಾಸಿಲ್​ ಲುಕ್​ ಔಟ್​: ಕೆಲವು ದಿನಗಳ ಹಿಂದೆ ಪುಷ್ಪ 2 ಚಿತ್ರದಲ್ಲಿ ಖಳನಾಯಕನ ಪಾತ್ರ ಮಾಡುತ್ತಿರುವ ಫಹಾದ್​ ಫಾಸಿಲ್​ ಅವರ ಫಸ್ಟ್​ ಲುಕ್​ ಅನ್ನು ಚಿತ್ರತಂಡ ಬಿಡುಗಡೆಗೊಳಿಸಿತ್ತು. ಖಾಕಿ ಜಾಕೆಟ್​ ಮತ್ತು ಕೂಲಿಂಗ್​ ಗ್ಲಾಸ್​ ಧರಿಸಿ ಸಿಗರೇಟ್​ ಸೇದುತ್ತಿರುವ ನೋಟದಲ್ಲಿ ಫಹಾದ್​ ಫಾಸಿಲ್​ ಕಾಣಿಸಿಕೊಂಡಿದ್ದಾರೆ. ತಲೆಯಲ್ಲಿ ಕೂದಲಿಲ್ಲದೇ ವಿಲನ್​ ಪಾತ್ರಕ್ಕೆ ಬೇಕಾದಂತೆ ಅವರನ್ನು ತೋರಿಸಲಾಗಿದೆ. ಫಹಾದ್​ ಫಾಸಿಲ್​ ವಿಲನ್​ ಲುಕ್​ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಪುಷ್ಪ 2: ದಿ ರೂಲ್​ ಸಿನಿಮಾವನ್ನು ಸುಕುಮಾರನ್ ಬರೆದು​ ನಿರ್ದೇಶಿಸಿದ್ದಾರೆ. ಮೈತ್ರಿ ಮೂವೀ ಮೇಕರ್ಸ್​ ನಿರ್ಮಿಸಿದೆ. 2023ರ ಡಿಸೆಂಬರ್ ಕೊನೆಯಲ್ಲಿ ಸಿನಿಮಾ ತೆರೆಗೆ ಬರಲಿದೆ. ಚಿತ್ರದಲ್ಲಿ ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ, ಫಹಾದ್​ ಫಾಸಿಲ್​, ಸುನೀಲ್​, ಅಜಯ್​, ರಾವ್​ ರಮೇಶ್​, ಅನುಸೂಯಾ ಸೇರಿದಂತೆ ಅನೇಕರು ನಟಿಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ