Breaking News

ಗಂಗಾವತಿ: ಗ್ರಾ.ಪಂಚಾಯಿತಿ ಅಧ್ಯಕ್ಷಗಿರಿ ಮೀಸಲಾತಿ ಸಂಘರ್ಷ; ಹಲವರಿಗೆ ಗಾಯ, ಬೂದಗುಂಪಾ ಉದ್ವಿಗ್ನ

Spread the love

ಗಂಗಾವತಿ (ಕೊಪ್ಪಳ): ಗ್ರಾಮ ಪಂಚಾಯಿತಿಗೆ ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಪ್ರಕಟವಾದ ಮೀಸಲಾತಿ ಅವೈಜ್ಞಾನಿಕವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗಿದೆ.

ಪರಸ್ಪರ ದೊಣ್ಣೆ, ರಾಡ್ ಸೇರಿದಂತೆ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಕಾರಟಗಿ ತಾಲ್ಲೂಕಿನ ಬೂದಗುಂಪಾ ಗ್ರಾಮದಲ್ಲಿ ಇಂದು (ಭಾನುವಾರ) ಘಟನೆ ನಡೆಯಿತು.

ಗಂಭೀರ ಗಾಯಗೊಳಗಾದವರನ್ನು ಸಮುದಾಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರನ್ನು ಗಂಗಾವತಿ ಉಪವಿಭಾಗ ಆಸ್ಪತ್ರೆಗೆ ಕಳುಹಿಸಲಾಗಿದೆ. ಸದ್ಯ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಬಣದ ಒಟ್ಟು 30ಕ್ಕೂ ಹೆಚ್ಚು ಜನರ ಮೇಲೆ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ