Breaking News

ಮಾನಸಿಕ ಖಿನ್ನತೆಯಲ್ಲಿ ಅಶ್ವತ್ಥನಾರಾಯಣ್​ ಅವರಿದ್ದಾರೆ ಎಂದ ಡಿ ಕೆ ಶಿವಕುಮಾರ್

Spread the love

ಬೆಂಗಳೂರು : ಇವರು ಅಶ್ವತ್ಥನಾರಾಯಣ್​ ಅಲ್ಲ. ನವರಂಗಿ ನಾರಾಯಣ.

ಕಳ್ಳರನ್ನು ರಕ್ಷಣೆ ಮಾಡುವಲ್ಲಿ ಇವರು ಡಾಕ್ಟರೇಟ್ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾಜಿ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ರಾಮನಗರ ಕ್ಲೀನ್ ಮಾಡುತ್ತೇನೆ ಎಂದು ಬಂದವರು, ಜಿಲ್ಲೆಯಲ್ಲಿ ಅವರ ಪಕ್ಷವನ್ನೇ ಕ್ಲೀನ್ ಮಾಡಿದರು. ಆ ಮಾನಸಿಕ ಖಿನ್ನತೆಯಲ್ಲಿ ಅವರಿದ್ದಾರೆ. ಅಶ್ವತ್ಥನಾರಾಯಣ್ ಅವರು ತಮ್ಮ ಇಲಾಖೆಯಲ್ಲಿ ಹಾಗೂ ಬೆಂಗಳೂರಿನಲ್ಲಿ ಏನೆಲ್ಲಾ ಮಾಡಿದ್ದಾರೆ ಎಂಬ ವಿಚಾರವನ್ನು ಬಿಚ್ಚಿಟ್ಟಿಲ್ಲ. ಈ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಸಮಯ ಬಂದಾಗ ಅವರ ಎಲ್ಲಾ ಅಕ್ರಮಗಳನ್ನು ಬಿಚ್ಚಿಡುತ್ತೇವೆ ಎಂದರು.

ಅಶ್ವತ್ಥನಾರಾಯಣ್ ಅವರಿಗೆ ಪ್ರಾಮಾಣಿಕ ಗುತ್ತಿಗೆದಾರರ ರಕ್ಷಣೆ ಬಗ್ಗೆ ಚಿಂತೆ ಇಲ್ಲ. ಇದ್ದಿದ್ದರೆ ಅವರ ಕಾಲದಲ್ಲೇ ಬಿಲ್ ಪಾವತಿ ಮಾಡುತ್ತಿದ್ದರು. ಈಗ ತಮ್ಮದೇ ಆದ ಕೆಲವು ಬಿಜೆಪಿ ಗುತ್ತಿಗೆದಾರರನ್ನು ಎತ್ತಿ ಕಟ್ಟಿ ನಕಲಿ ಗುತ್ತಿಗೆದಾರರು, ಬೇನಾಮಿ ಕಳ್ಳರ ರಕ್ಷಣೆಗೆ ನಿಂತಿದ್ದಾರೆ. ಅಶ್ವತ್ಥನಾರಾಯಣ್ ಕೃಪಾಪೋಷಿತ ನಾಟಕ ಮಂಡಳಿ ಆಟ ಜಾಸ್ತಿ ದಿನ ನಡೆಯಲ್ಲ.

ಯಾರು ಎಷ್ಟು ಕೆಲಸ ಮಾಡಿದ್ದಾರೆ? ಹೇಗೆ ಮಾಡಿದ್ದಾರೆ? ಯಾರು ಯಾರನ್ನು ಹೇಗೆ ಎತ್ತಿಕಟ್ಟುತ್ತಿದ್ದಾರೆ? ಎಂಬುದು ಬಯಲಾಗಲಿದೆ. ಪ್ರಾಮಾಣಿಕ ಗುತ್ತಿಗೆದಾರರ ರಕ್ಷಣೆಗೆಂದೇ ಪ್ರಾಥಮಿಕ ತನಿಖೆ ಮಾಡಲೇಬೇಕು. ಅದನ್ನು ಸರ್ಕಾರ ಮಾಡುತ್ತಿದೆ. ತಪ್ಪಿಸಲು ಅವರು ಇಷ್ಟೆಲ್ಲಾ ಆಟವಾಡುತ್ತಿದ್ದಾರೆ. ಅವರು ಎಲ್ಲಿಗೆ ಬೇಕಾದರೂ ಹೋಗಲಿ. ಏನು ಬೇಕಾದರೂ ಮಾಡಲಿ. ರಾಜ್ಯಪಾಲರಿಗೆ ಮಾತ್ರವಲ್ಲ ರಾಷ್ಟ್ರಪತಿ ಬಳಿಗೂ ಹೋಗಲಿ. ಯಾವುದೇ ಅಭಿಯಾನ ಮಾಡಲಿ. ನಾನು ಈ ವಿಚಾರವಾಗಿ ಮೊನ್ನೆಯೇ ಮಾತನಾಡಬೇಕಿತ್ತು. ಆದರೆ ಬಿಬಿಎಂಪಿ ಗುಣಮಟ್ಟ ಪರೀಕ್ಷಾ ಪ್ರಯೋಗಾಲಯದಲ್ಲಿ ಅಗ್ನಿ ಅವಘಡ ಸಂಭವಿಸಿತು. ಇಂದು ಪಕ್ಷದ ಸಭೆ ಇದೆ. ನಾಳೆ ಸ್ವಾತಂತ್ರ್ಯ ದಿನಾಚರಣೆ ಇದೆ. ಹೀಗಾಗಿ ಈಗ ಮಾತನಾಡುವುದಿಲ್ಲ. ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ ಎಂದು ಡಿಸಿಎಂ ಹೇಳಿದರು.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ