Breaking News

ರಾಘವೇಂದ್ರ ರಾಜ್​ಕುಮಾರ್ ಮತ್ತು ಶೃತಿ ಅಭಿನಯದ ’13’ ಸಿನಿಮಾಗೆ ಸೆನ್ಸಾರ್​ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ.

Spread the love

ರಾಘವೇಂದ್ರ ರಾಜ್​ಕುಮಾರ್ ಮತ್ತು ಶೃತಿ ಅಭಿನಯದ ’13’ ಸಿನಿಮಾಗೆ ಸೆನ್ಸಾರ್​ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ.

ಕನ್ನಡ ಚಿತ್ರರಂಗದ ಸ್ಟಾರ್​ ನಟ ರಾಘವೇಂದ್ರ ರಾಜ್​ಕುಮಾರ್ ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಿಡುಗಡೆ ಹಂತದಲ್ಲಿರುವ ಅವರ ಮುಂದಿನ ಚಿತ್ರ ’13’.

ಕೆ ನರೇಂದ್ರ ಬಾಬು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಸಿನಿಮಾದಲ್ಲಿ ನಾಯಕಿಯಾಗಿ ಶೃತಿ ನಟಿಸಿದ್ದಾರೆ. ಸದ್ಯ ಶೂಟಿಂಗ್​ ಮುಗಿಸಿರುವ ಚಿತ್ರತಂಡ ಸಿನಿಮಾ ಬಿಡುಗಡೆಗೆ ತಯಾರಿ ಮಾಡಿಕೊಂಡಿದೆ. ಇತ್ತೀಚೆಗೆ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್​ ಮಂಡಳಿ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ನೀಡಿದೆ.

ಪ್ರತಿ ಬಾರಿಯೂ ‘ಓ ಗುಲಾಬಿ’, ‘ಪಲ್ಲಕ್ಕಿ’ಯಂತಹ ಸುಂದರ ಪ್ರೇಮ ಕಥೆಗಳನ್ನು ಪ್ರೇಕ್ಷಕರಿಗೆ ಉಣಬಡಿಸುವ ನರೇಂದ್ರ ಬಾಬು ಅವರು ’13’ ಚಿತ್ರದಲ್ಲಿ ಭಾವೈಕ್ಯತೆಯ ಸಾಮಾಜಿಕ ಸಂದೇಶವಿರುವ ಕಥೆಯೊಂದನ್ನು ನಿರೂಪಣೆ ಮಾಡಿದ್ದಾರೆ. ಗಂಡ ಹೆಂಡತಿ ಅಂದ್ರೆ ಹೀಗಿರಬೇಕು ಎನ್ನುವಂತಿದ್ದ ದಂಪತಿ ತಮ್ಮದಲ್ಲದ ತಪ್ಪಿಗೆ ಜೀವನಪೂರ್ತಿ ಯಾವ ರೀತಿ ಕಷ್ಟ ಪಡುತ್ತಾರೆ ಎಂಬುದನ್ನು ಥ್ರಿಲ್ಲರ್​ ಕಥೆಯ ಮೂಲಕ ಹೇಳುವ ಚಿತ್ರ ಇದಾಗಿದೆ. ಸಿನಿಮಾದಲ್ಲಿ ಥ್ರಿಲ್ಲರ್ ಜೊತೆಗೆ ಮನರಂಜನೆ, ಸಸ್ಪೆನ್ಸ್ ಕಂಟೆಂಟ್ ಕೂಡ ಇರಲಿದೆ.

ಸಿನಿಮಾದಲ್ಲಿ ರಾಘವೇಂದ್ರ ರಾಜ್​ಕುಮಾರ್​ ಅವರು ನಿವೃತ್ತ ಸೈನಿಕ ಹಾಗೂ ಗುಜರಿ ಅಂಗಡಿ ಮಾಲೀಕ ಮೋಹನ್​ ಕುಮಾರ್​ ಪಾತ್ರದಲ್ಲಿ ನಟಿಸಿದ್ದಾರೆ. ಟೀ ಅಂಗಡಿ ನಡೆಸುವ ಸಾಯಿರಾಬಾನು ಎಂಬ ಮುಸ್ಲಿಂ ಮಹಿಳೆಯ ಪಾತ್ರಕ್ಕೆ ಶೃತಿ ಜೀವ ತುಂಬಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಭಾಗದಲ್ಲಿ ನಡೆದ ಒಂದು ನೈಜ ಘಟನೆಯನ್ನು ಸ್ಫೂರ್ತಿಯಾಗಿಟ್ಟುಕೊಂಡು ನಿರ್ದೇಶಕರು ಈ ಚಿತ್ರದ ಕಥೆಯನ್ನು ಹೆಣೆದಿದ್ದಾರೆ. ಸಿನಿಮಾದಲ್ಲಿ ಸ್ಟಾರ್​ ನಟ ಪ್ರಮೋದ್​ ಶೆಟ್ಟಿಯವರು ಪೊಲೀಸ್​ ಅಧಿಕಾರಿಯ ಪಾತ್ರ ನಿರ್ವಹಿಸಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ