Breaking News

ಎಲ್ ಪಿ ಜಿ ಸಿಲಿಂಡರ್ ಗಳ ಬೆಲೆಯನ್ನು 75 ರೂಪಾಯಿ ಹೆಚ್ಚಿಸಲಾಗಿದೆ.

Spread the love

ಹೊಸದಿಲ್ಲಿ:  ತರಕಾರಿ ಇನ್ನಿತರೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿದ ಜನತೆಗೆ ಮತ್ತೆ ಎಲ್ ಪಿ ಜಿ ದರ ಏರಿಕೆಯ ಬಿಸಿ ತಟ್ಟಿದೆ.

ಕಳೆದ ತಿಂಗಳಷ್ಟೇ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಿಸಲಾಗಿತ್ತು. ಮತ್ತೆ ಇದೀಗ 19 ಕೆಜಿ ಕಮರ್ಷಿಯಲ್ ಎಲ್ ಪಿ ಜಿ ಸಿಲಿಂಡರ್ ಗಳ ಬೆಲೆಯನ್ನು 75 ರೂಪಾಯಿ ಹೆಚ್ಚಿಸಲಾಗಿದೆ. ಈ ಕುರಿತು ಇಂಡಿಯನ್ ಆಯಿಲ್ ಕಾರ್ಪೋರೇಷನ್ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. 19 ಕೆಜಿಯ ಕಮರ್ಷಿಯಲ್ ಸಿಲಿಂಡರ್ ಬೆಲೆಯನ್ನು 75 ರೂಪಾಯಿ ಹೆಚ್ಚಳ ಮಾಡಲಾಗಿದೆ.

ಇದರಿಂದಾಗಿ ದೆಹಲಿಯಲ್ಲಿ 19 ಕೆಜಿ ಕಮರ್ಷಿಯಲ್ ಸಿಲಿಂಡರ್ ಬೆಲೆ ರೂ.1241.50ಕ್ಕೆ ಏರಿಕೆಯಾದಂತೆ ಆಗಿದೆ. ಕಳೆದ ಅಕ್ಟೋಬರ್ ನಲ್ಲಿ ಈ ಬೆಲೆ ರೂ.1166 ಆಗಿತ್ತು.

ಇನ್ನೂ ಕೇವಲ ಕಮರ್ಷಿಯಲ್ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಿಸಲಾಗಿದ್ದು ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ .


Spread the love

About Laxminews 24x7

Check Also

ಕಂಬಳ ಅತ್ಯಂತ ಜನಪ್ರಿಯ ಗ್ರಾಮೀಣ ಕ್ರೀಡೆ: ಸಿಎಂ ಸಿದ್ದರಾಮಯ್ಯ

Spread the love    ಮಂಗಳೂರು : ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ