Breaking News
Home / ರಾಜಕೀಯ / ಆಗಸ್ಟ್​ 15ರಂದು ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಹಾವೇರಿಯ ಪುಷ್ಪಾವತಿ ಸೋಮಪ್ಪ ಹೊನ್ನತ್ತಿ ಭಾಗವಹಿಸಲಿದ್ದಾರೆ.

ಆಗಸ್ಟ್​ 15ರಂದು ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಹಾವೇರಿಯ ಪುಷ್ಪಾವತಿ ಸೋಮಪ್ಪ ಹೊನ್ನತ್ತಿ ಭಾಗವಹಿಸಲಿದ್ದಾರೆ.

Spread the love

ಹಾವೇರಿ : ಆಗಸ್ಟ್​​ 15ರಂದು ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಯ ಪುಷ್ಪಾವತಿ ಸೋಮಪ್ಪ ಹೊನ್ನತ್ತಿ ಅವರು ಆಯ್ಕೆಯಾಗಿದ್ದಾರೆ. ಪುಷ್ಪಾವತಿ ಅವರು ರಾಣೆಬೆನ್ನೂರು ತಾಲೂಕಿನ ಚಿಕ್ಕಕುರುವತ್ತಿ ಗ್ರಾಮ ಪಂಚಾಯತ್​ನಲ್ಲಿ ಮಹಿಳಾ ನೀರಗಂಟಿ (ವಾಟರ್​ ವುಮನ್​) ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲು ಪುಷ್ಪಾವತಿ ಅವರಿಗೆ ಅವಕಾಶ ಲಭಿಸಿದ್ದು, ಈ ಸಂಬಂಧ ಹರ್ಷ ವ್ಯಕ್ತಪಡಿಸಿದ್ದಾರೆ.

ಜಲಜೀವನ್ ಮಿಷನ್ ಯೋಜನೆಯಡಿ ಹರ್ ಘರ್ ಜಲ್ ಎಂದು ಘೋಷಣೆ ಮಾಡಿರುವ ಗ್ರಾಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಒಬ್ಬರ ಹೆಸರನ್ನು ಕಳುಹಿಸಲು ರಾಜ್ಯ ಸರ್ಕಾರ ಜಿಲ್ಲಾ ಪಂಚಾಯತ್ ಸಿಇಒಗೆ ಆದೇಶ ಮಾಡಿತ್ತು. ಅದರಂತೆ ಹಾವೇರಿಯ ಸಿಇಒ ಅಕ್ಷಯ ಶ್ರೀಧರ್ ಅವರು ಮಹಿಳಾ ನೀರಗಂಟಿಯಾಗಿರುವ ಪುಷ್ಪಾವತಿ ಹೆಸರು ಕಳುಹಿಸಿಕೊಟ್ಟಿದ್ದರು. ಈ ಸಂಬಂಧ ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪುಷ್ಪಾವತಿ ಅವರಿಗೆ ಕರೆ ಬಂದಿದೆ.

ಈ ಸಂಬಂಧ ಪ್ರತಿಕ್ರಿಯಿಸಿರುವ ಪುಷ್ಪಾವತಿ ಹೊನ್ನತ್ತಿ ಅವರು, “ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ತೆರಳಲು ಬೆಂಗಳೂರಿನಿಂದ ಕರೆ ಬಂತು. ಜಿಲ್ಲಾ ಪಂಚಾಯತ್​ ಅವರು ನನಗೆ ಕರೆ ಮಾಡಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ಆಯ್ಕೆ ಆಗಿರುವ ಬಗ್ಗೆ ತಿಳಿಸಿದರು. ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ನನಗೆ ಅವಕಾಶ ಸಿಕ್ಕಿದ್ದು ತುಂಬಾ ಸಂತೋಷವಾಗಿದೆ. ನಾನು ಬೆಂಗಳೂರನ್ನೇ ಕಂಡಿಲ್ಲ. ಇದೀಗ ಮೊದಲ ಬಾರಿಗೆ ಬೆಂಗಳೂರು ನಗರವನ್ನು ಕಾಣುತ್ತಿದ್ದೇನೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತುಂಬು ಹೃದಯದಿಂದ ಧನ್ಯವಾದವನ್ನು ಅರ್ಪಿಸುತ್ತೇನೆ” ಎಂದು ಹೇಳಿದರು.


Spread the love

About Laxminews 24x7

Check Also

ಬೈಲಹೊಂಗಲದಲ್ಲಿ ಇದ್ದಾರೆ ‘ಹತ್ತು ರೂಪಾಯಿ’ ಡಾಕ್ಟ್ರು

Spread the love ಬೈಲಹೊಂಗಲ: ಇದು ದುಬಾರಿ ಯುಗ. ಇಂದು ಬಹುತೇಕ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಶುಲ್ಕ ಜನರ ಕೈಸುಡುತ್ತಿದೆ. ಆದರೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ