Breaking News

ಬಿಜೆಪಿಯವರು ತಮ್ಮ ಬಳಿ ಜಮಾ ಇರುವ 40 ಪರ್ಸೆಂಟ್ ಹಣವನ್ನು ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಬಳಸಬೇಕೆಂದುಕೊಂಡಿದ್ದಾರೆ. ಆದರೆ, ಈ ಬಾರಿ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಸಾಧ್ಯವಿಲ್ಲ

Spread the love

ಹುಬ್ಬಳ್ಳಿ: ಬಿಜೆಪಿಯವರು 40 ಪರ್ಸೆಂಟ್ ಭ್ರಷ್ಟ ಹಣದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಬಹುದು ಎಂದು ಕೊಂಡಿದ್ದಾರೆ. ಆದರೆ ಬಿಜೆಪಿಯಿಂದ ಕರ್ನಾಟಕ ಸರ್ಕಾರ ಅಭದ್ರಗೊಳಿಸುವುದು ಅಸಾಧ್ಯದ ಮಾತು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಮಾಜಿ ಸಿಎಂ ದಿಗ್ವಿಜಯ ಸಿಂಗ್ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಬಿಜೆಪಿ ದೇಶದ ಸಂವಿಧಾನವನ್ನು ಬುಡಮೇಲು ಮಾಡಲು ಹೊರಟಿದೆ. ಅಹಂಕಾರದಿಂದ ಅವರು ಮಾತನಾಡುತ್ತಿದ್ದಾರೆ. ತಮ್ಮ ಬಳಿ ಜಮಾ ಇರುವ 40 ಪರ್ಸೆಂಟ್ ಹಣವನ್ನು ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಬಳಸಬೇಕೆಂದುಕೊಂಡಿದ್ದಾರೆ. ಆದರೆ ಈ ಬಾರಿ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿದೆ’ ಎಂದರು.

ಭಾರತ ಹಿಂದೂ ರಾಷ್ಟ್ರ ಎಂಬ ಕಮಲಾನಾಥ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ದಿಗ್ವಿಜಯ ಸಿಂಗ್ ‘ಕಮಲಾನಾಥ್ ಆ ರೀತಿ ಹೇಳಿಲ್ಲ. ಭಾರತೀಯ ಸಂವಿಧಾನದಲ್ಲಿ ಎಲ್ಲ ವ್ಯಕ್ತಿಗಳಿಗೂ ತನ್ನ ಧರ್ಮ ಪಾಲನೆಗೆ ಅವಕಾಶವಿದೆ. ಭಾರತದಲ್ಲಿ ಸಂವಿಧಾನವೇ ಸರ್ವಸ್ವ ಆಗಿದೆ. ಹಿಂದೂಗಳ ಜನಸಂಖ್ಯೆ ಇಲ್ಲಿ ಹೆಚ್ಚಿದೆ. ನೇಪಾಳದ ಜನಸಂಖ್ಯೆಯಲ್ಲಿ ಅತಿ ಹೆಚ್ಚು ಹಿಂದುಗಳೇ ಇದ್ದಾರೆ. ಆದರೆ ನೇಪಾಳ ಹಿಂದೂ ರಾಷ್ಟ್ರ ಅಂತ ಘೋಷಿಸಿಕೊಂಡಿಲ್ಲ. ಜಾತ್ಯತೀತ ಸಂವಿಧಾನ ಅಳವಡಿಸಲಾಗಿದೆ. ಪಾಕಿಸ್ತಾನ ಇಸ್ಲಾಂ ರಾಷ್ಟ್ರ ಅಂತಾ ಘೋಷಿಸಿಕೊಂಡ ನಂತರ ಏನಾಗಿದೆ ಅಂತ ಎಲ್ಲರಿಗೂ ಗೊತ್ತಿದೆ . ಅಲ್ಲಿ ಮುಸಲ್ಮಾನರೇ ಮುಸಲ್ಮಾನರನ್ನು ಹೊಡೆದು ಹಾಕಿದ್ದಾರೆ. ಇಲ್ಲಿ ಹಿಂದೂ ರಾಷ್ಟ್ರದ ಪ್ರಶ್ನೆಯಿಲ್ಲ ದೇಶ ಎಲ್ಲರಿಗೂ ಸೇರಿದ್ದಾಗಿದೆ’ ಎಂದರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ