Home / ರಾಜಕೀಯ / ಕೊಪ್ಪಳದ ಗಂಗಾವತಿಯಲ್ಲಿ ಅನಧಿಕೃತವಾಗಿ ಹೋಟೆಲ್​ ರೆಸಾರ್ಟ್​ಗಳು ಕಾರ್ಯನಿರ್ವಹಿಸಿದ್ದ ಹಿನ್ನೆಲೆ ದಾಳಿ ಮಾಡಿದ ಪೊಲೀಸರು

ಕೊಪ್ಪಳದ ಗಂಗಾವತಿಯಲ್ಲಿ ಅನಧಿಕೃತವಾಗಿ ಹೋಟೆಲ್​ ರೆಸಾರ್ಟ್​ಗಳು ಕಾರ್ಯನಿರ್ವಹಿಸಿದ್ದ ಹಿನ್ನೆಲೆ ದಾಳಿ ಮಾಡಿದ ಪೊಲೀಸರು

Spread the love

ಗಂಗಾವತಿ: ಹಂಪಿ ಪ್ರಾಧಿಕಾರದ ನಿಯಮ ಮೀರಿಯೂ ಅನಧಿಕೃತವಾಗಿ ಹೋಟೆಲ್​ ರೆಸಾರ್ಟ್​ಗಳು ಕಾರ್ಯನಿರ್ವಹಿಸಿದ್ದ ಹಿನ್ನೆಲೆ ದಾಳಿ ಮಾಡಿದ ಪ್ರಾಧಿಕಾರದ ಅಧಿಕಾರಿಗಳು, ಹನ್ನೊಂದು ರೆಸಾರ್ಟ್​ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ರೂಪಕ ಕುಮಾರ ಬಿಸ್ವಾಸ್​, ರಾಜು , ವರುಣ್ , ಕರುಣಾಕರ್ , ಗಾಳೇಶ್ , ಆಸೀಫ್ , ಚಂದ್ರಶೇಖರಗೌಡ , ಶ್ರೀಕಾಂತ್ ಹೊಸಳ್ಳಿ, ರವಿಚಂದ್ರ, ಸಂದೀಪ್ ಶೇಟ್ ಹಾಗೂ ಮೌಲಾಲಿ ಎಂಬುವವರಿಗೆ ಸೇರಿದ ರೆಸಾರ್ಟ್​ಗಳ ಮೇಲೆ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಬಗ್ಗೆ ಹಂಪಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಎಂ.ಪಿ. ಮಾರುತಿ ದೂರು ದಾಖಲಿಸಿದ್ದು, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಯಾವುದೇ ಅನಧಿಕೃತ ವಾಣಿಜ್ಯ ಚಟುವಟಿಕೆ, ರೆಸಾರ್ಟ್​, ಹೋಟೆಲ್​ ನಡೆಸದಂತೆ ಸೂಚನೆ ನೀಡಲಾಗಿತ್ತು. ಆದರೆ, ಪ್ರಾಧಿಕಾರದ ಆದೇಶ ಉಲ್ಲಂಘಿಸಿಯೂ ಈ ರೆಸಾರ್ಟ್​ ಮಾಲೀಕರು ವಾಣಿಜ್ಯ ಚಟುವಟಿಕೆ ನಡೆಸುವ ಮೂಲಕ ಪ್ರಾಧಿಕಾರದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಪ್ರಾಧಿಕಾರದ ಆಯುಕ್ತ ಸಲ್ಲಿಸಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಜೂಜಾಟ ಪ್ರಮುಖರ ಬಂಧನ: ಬ್ಯಾಂಕಿನ ಆವರಣದಲ್ಲಿ ಕಾನೂನು ಬಾಹಿರ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ದಾಳಿ ಮಾಡಿದ ಪೊಲೀಸರು, ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರು, ಉದ್ಯಮಿಗಳು, ಸಾಮಾಜದ ಪ್ರಮುಖರನ್ನು ಬಂಧಿಸಿದ ಘಟನೆ ನಡೆದಿದೆ. ಗಂಗಾವತಿ ತಾಲೂಕಿನ ಶ್ರೀರಾಮನಗರದ ಪ್ರಗತಿ ಗ್ರಾಮೀಣ ಸೌಹಾರ್ದ ಪತ್ತಿನ ಸಹಕಾರಿ ಬ್ಯಾಂಕಿನ ಆವರಣದ ಕಟ್ಟಡದ ಕೊಠಡಿಯೊಂದರಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿಯ ಸಂದರ್ಭದಲ್ಲಿ ರಾಜಕೀಯ ಪಕ್ಷಗಳಿಗೆ ಸೇರಿದ ಪ್ರಮುಖರು, ಹಣಕಾಸು ಲೇವಾದೇವಿದಾರರು, ಪ್ರಮುಖ ವರ್ತಕರು, ವ್ಯಾಪಾರಿಗಳು, ನಾನಾ ವಲಯದಲ್ಲಿ ಗುರುತಿಸಿಕೊಂಡಿರುವ ಪ್ರಮುಖರನ್ನು ಪೊಲೀಸರು ಬಂಧಿಸಿದ್ದಾರೆ.

 


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ