Breaking News

ವೃದ್ಧರನ್ನೇ ಟಾರ್ಗೆಟ್ ಮಾಡಿ ಹನಿಟ್ರ್ಯಾಪ್ ಬೆಂಗಳೂರಲ್ಲಿ ಕಿಲಾಡಿ ಮಹಿಳೆಯರ ಬಂಧನ

Spread the love

ಬೆಂಗಳೂರು: ವಯೋವೃದ್ಧರನ್ನು ಗುರಿಯಾಗಿಸಿ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿ ಹಣ ಸುಲಿಗೆ ಮಾಡುತ್ತಿದ್ದ ದಂಪತಿ ಸೇರಿ ಮೂವರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ನಿವೃತ್ತ ಸರ್ಕಾರಿ ನೌಕರನಾಗಿರುವ ಸುಧೀಂದ್ರ ಎಂಬುವರು ನೀಡಿದ ದೂರಿನ ಮೇರೆಗೆ ಅಣ್ಣಮ್ಮ, ಲೋಕೇಶ್ ಹಾಗೂ ಸ್ನೇಹ ಎಂಬುವರನ್ನ ಬಂಧಿಸಲಾಗಿದೆ. ಬಂಧಿತರೆಲ್ಲರೂ ಮೂಲತಃ ಕೊಡಗಿನವರಾಗಿದ್ದು, ಬೊಮ್ಮನಹಳ್ಳಿಯಲ್ಲಿ ಒಂದೇ ಮನೆಯಲ್ಲಿ ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ಪ್ರಮುಖ ಆರೋಪಿ ಅಣ್ಣಮ್ಮ ತನ್ನ ಮಗುವಿಗೆ ಹುಷಾರಿಲ್ಲ, ಹಣಕಾಸಿನ ನೆರವು ನೀಡುವಂತೆ ಪರಿಚಯಸ್ಥರಾಗಿದ್ದ ಸುಧೀಂದ್ರ ಅವರನ್ನ ಕೋರಿಕೊಂಡಿದ್ದಳು. ಸಂಕಷ್ಟ ನೋಡಲಾರದೆ ಅವರು ಈಕೆಗೆ ಐದು ಸಾವಿರ‌ ರೂಪಾಯಿ ಸಹಾಯ ಮಾಡಿದ್ದರು‌.‌ ನಂತರ ಇಬ್ಬರ ನಡುವಿನ ಪರಿಚಯ ಸಲುಗೆಗೆ ತಿರುಗಿತ್ತು.‌

ವಿವಿಧ ಕಾರಣಗಳನ್ನು ನೀಡಿ ಸುಧೀಂದ್ರ ಅವರಿಂದ ಅಣ್ಣಮ್ಮ ಹಣ ಪಡೆದುಕೊಂಡಿದ್ದಳು. ಒಂದು ತಿಂಗಳ ಬಳಿಕ ಹೂಸ್ಕೂರು ಗೇಟ್ ಬಳಿ ಲಾಡ್ಜ್​ವೊಂದರ ರೂಮ್​ಗೆ ಕರೆಯಿಸಿಕೊಂಡಿದ್ದ ಅಣ್ಣಮ್ಮ, ಸುಧೀಂದ್ರನೊಂದಿಗೆ ಸೆಕ್ಸ್ ಮಾಡಿದ್ದಳು. ಅಲ್ಲದೇ, ರಹಸ್ಯವಾಗಿ ವಿಡಿಯೋ ಮಾಡಿಕೊಂಡಿದ್ದಳು.‌ ಇದೇ ರೀತಿ ಎರಡು ಬಾರಿ ಕರೆಯಿಸಿಕೊಂಡು ಬಲವಂತದಿಂದ ಸೆಕ್ಸ್ ಮಾಡಿಸಿಕೊಂಡಿದ್ದಳು. ಬಳಿಕ ಹಣ ನೀಡದಿದ್ದರೆ ಏಕಾಂತದ ಫೋಟೋ ಹಾಗೂ ವಿಡಿಯೋಗಳನ್ನ ಕುಟುಂಬ ಹಾಗೂ ಸ್ನೇಹಿತರಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಳು. ಅಲ್ಲದೇ ಸ್ನೇಹ ಎಂಬಾಕೆಗೂ ಕಳುಹಿಸಿ ಆಕೆಯಿಂದ ಬ್ಲ್ಯಾಕ್ ಮೇಲ್ ಮಾಡಿಸಿದ್ದಳು. ಮರ್ಯಾದೆಗೆ ಅಂಜಿ ಅವರು ಹಂತ-ಹಂತವಾಗಿ 82 ಲಕ್ಷದವರೆಗೂ ನೀಡಿದ್ದಾರೆ. ಈ‌ ಕೃತ್ಯಕ್ಕೆ ಸ್ನೇಹ ಪತಿ ಲೋಕೇಶ್ ಸಾಥ್ ನೀಡಿದ್ದ.

ಇಷ್ಟಕ್ಕೆ ಸುಮ್ಮನಾಗದ ಆರೋಪಿಗಳು ಮತ್ತೆ 42 ಲಕ್ಷ ಹಣ ಕೊಡುವಂತೆ ಡಿಮ್ಯಾಂಡ್ ಮಾಡಿದ್ದಾರೆ. ಇವರ ಬೆದರಿಕೆ ಕಾಟ ತಾಳಲಾರದೆ ಜಯನಗರ ಪೊಲೀಸರಿಗೆ ಸುಧೀಂದ್ರ ದೂರು ನೀಡಿದ್ದರು. ಇದರಂತೆ ಕಾರ್ಯಾಚರಣೆ ಕೈಗೊಂಡು ಮೂವರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.


Spread the love

About Laxminews 24x7

Check Also

ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕಾಮಗಾರಿ ಕೈಗೊಳ್ಳಿ :ಶಾಸಕ ರಾಜು ಶೆಠ್

Spread the love ಫ್ಲೈಓವರ್ ಕಾಮಗಾರಿಗೆ ಸಂಬಂಧಿಸಿದ ಪ್ರಮುಖ ಪ್ರದೇಶಗಳ ಪರಿಶೀಲನೆ ನಾಗರಿಕರ ಸುರಕ್ಷತೆ, ತುರ್ತು ಸೇವೆಗಳ ಪ್ರವೇಶ ಮಾರ್ಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ