Breaking News

ಸಿಎಂ ಆಗೋ ಭ್ರಮೆಯಲ್ಲಿರೋ ಡಿಕೆಶಿಗೆ ಸೋಲಿನ ಭಯ: ರೀರಾಮುಲು ವ್ಯಂಗ್ಯ

Spread the love

ಬಳ್ಳಾರಿ: ಉಪ ಚುನಾವಣೆ ಗೆದ್ದರೆ ಮುಖ್ಯಮಂತ್ರಿ ಆಗುವ ಭ್ರಮೆಯಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಸಚಿವ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.

ಶಿರಾದಲ್ಲಿ ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಚುನಾವಣಾ ಉಸ್ತುವಾರಿ ತೆಗೆದುಕೊಂಡಿದ್ದಾರೆ. ವಿಜಯೇಂದ್ರ ಹೋದ ಕಡೆ ಸೋಲು ಇಲ್ಲ. ಆದ್ರೆ ಶಿರಾದ ಜನತೆ ಮಾತ್ರ ಬಿಜೆಪಿಗೆ ಮತ ನೀಡಲಿದ್ದಾರೆ. ಈ ಹಿಂದೆ ಕೆ.ಆರ್.ಪೇಟೆ ಗೆಲುವಿಗೆ ಶ್ರಮಿಸಿದ್ದರು. ಆದ್ರೆ ಕಾಂಗ್ರೆಸ್ ಒಳ ಜಗಳದಿಂದಲೇ ಸೋಲುತ್ತೆ. ಸಿದ್ದರಾಮಯ್ಯನರವರು ಶಿರಾ ವಿಧಾನಸಭಾ ಕ್ಷೇತ್ರವನ್ನ ಬಹಳಷ್ಟು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಡಿ.ಕೆ.ಸುರೇಶ್ ಆರ್.ಆರ್.ನಗರವನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡು ಪ್ರಚಾರ ನಡೆಸಿದ್ದಾರೆ. ಇನ್ನು ಡಿ.ಕೆ.ಶಿವಕುಮಾರ್ ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದಾರೆ. ಇಬ್ಬರಿಗೂ ನಾನು ಶುಭ ಹಾರೈಸುತ್ತೇನೆ, ಆದ್ರೆ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.ಒಂದು ವೇಳೆ ಆರ್.ಆರ್.ನಗರ ಕ್ಷೇತ್ರವನ್ನ ಉಳಿಸಿಕೊಳ್ಳಲು ಡಿಕೆ ಸೋದರರು ಸೋತ್ರೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಸೂಕ್ತವೇ ಅನ್ನೋ ಪ್ರಶ್ನೆ ಹುಟ್ಟಿಕೊಳ್ಳುತ್ತದೆ. ಸಿಎಂ ಆಗೋ ಕನಸಿನನಲ್ಲಿರುವ ಡಿ.ಕೆ.ಶಿವಕುಮಾರ್ ಏಕವಚನದಲ್ಲಿ ಮಾತನಾಡುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ವ್ಯಾಪ್ತಿಯ ಕ್ಷೇತ್ರ ಸೋತರೆ ರಾಜ್ಯವನ್ನ ಡಿಕೆಶಿ ಹೇಗೆ ಮುನ್ನಡೆಸುತ್ತಾರೆ ಎನ್ನುವ ಪ್ರಶ್ನೆ ಉದ್ಭವವಾಗುತ್ತೆ ಎಂದರು.


Spread the love

About Laxminews 24x7

Check Also

ಅಡಿಕೆ ಸಾಗಿಸುತ್ತಿದ್ದ VRL ಲಾರಿ ತೋಟಕ್ಕೆ ಉರುಳಿ ಸಂಪೂರ್ಣ ಜಖಂ!

Spread the loveಶಿರಸಿ:ಶಿರಸಿಯಿಂದ ಹುಬ್ಬಳ್ಳಿಗೆ ಅಡಿಕೆ ಸಾಗಿಸುತ್ತಿದ್ದ VRL ಸಂಸ್ಥೆಗೆ ಸೇರಿದ ಲಾರಿಯೊಂದು ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ಕಳೆದುಕೊಂಡು ರಸ್ತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ