Breaking News

ವಿದ್ಯುತ್ ಸಂಪರ್ಕ ಕಲ್ಪಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಬೆಸ್ಕಾಂನ ಎಇಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Spread the love

ಬೆಂಗಳೂರು: ವಿದ್ಯುತ್ ಸಂಪರ್ಕ ನೀಡಲು 13 ಲಕ್ಷ ರೂಪಾಯಿ ಲಂಚದ ಬೇಡಿಕೆಯಿಟ್ಟಿದ್ದ ಬೆಸ್ಕಾಂ ಎಇಇ ಧನಂಜಯ ಎಂಬವರನ್ನು ಲೋಕಾಯುಕ್ತರು ಬಂಧಿಸಿದ್ದಾರೆ.

ಜಯನಗರದ ಕಟ್ಟಡವೊಂದಕ್ಕೆ ವಿದ್ಯುತ್ ಸಂಪರ್ಕ ಪಡೆಯಲು ಕಾಂಟ್ರಾಕ್ಟರ್​ಗಳಾದ ಶಂಕರ್ ಮತ್ತು ಗುರುದತ್ ಎಂಬವರು ಅರ್ಜಿ ಸಲ್ಲಿಸಿದ್ದರು. ವಿದ್ಯುತ್ ಸಂಪರ್ಕ ನೀಡಲು ಧನಂಜಯ ಖಾಸಗಿ ವ್ಯಕ್ತಿ ಸಯ್ಯದ್ ನಿಜಾಮ್ ಎಂಬಾತನನ್ನು ಮುಂದಿಟ್ಟುಕೊಂಡು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತ ಇನ್ಸ್ಪೆಕ್ಟರ್ ವೆಂಕಟೇಶ ಮತ್ತು ವಿಜಯಕೃಷ್ಣ ತಂಡ ಟ್ರ್ಯಾಪ್ ಕಾರ್ಯಾಚರಣೆ ನಡೆಸಿದೆ. ಮುಂಗಡವಾಗಿ 3.5 ಲಕ್ಷ ರೂ ಲಂಚ ಸ್ವೀಕರಿಸುವಾಗ ಎಇಇ ಲೋಕಾಯುಕ್ತ ಬಲೆಗೆ ಬಿದ್ದರು.

​ಲೋಕಾಯುಕ್ತ ಬಲೆಗೆ ಕಾನ್​ಸ್ಟೇಬಲ್​: ಆರೋಪಿಗೆ ಸಹಾಯ ಮಾಡುವುದಾಗಿ ಹೇಳಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಹೆಡ್​ ಕಾನ್​ಸ್ಟೇಬಲ್​ 50 ಸಾವಿರ ರೂ ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದ ಘಟನೆ ಇತ್ತೀಚೆಗೆ ಬೆಂಗಳೂರಲ್ಲಿ ನಡೆದಿತ್ತು. ಸೈಬರ್ ಕ್ರೈಂ, ಆರ್ಥಿಕ ಅಪರಾಧ ಮತ್ತು ಮಾದಕ ದ್ರವ್ಯ (ಸಿಇಎನ್) ಪೊಲೀಸ್ ಠಾಣೆಯ ಮಹೇಶ್ ಎಂಬವರು ಲೋಕಾ ಬಲೆಗೆ ಬಿದ್ದಿದ್ದರು


Spread the love

About Laxminews 24x7

Check Also

ದಂಪತಿ ಮಲಗಿದ್ದಲ್ಲೇ ಅನುಮಾನಾಸ್ಪದ ಸಾವು; ಮನೆ, ಮೈಮೇಲಿದ್ದ ಚಿನ್ನಾಭರಣ ಕಳವು

Spread the love ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ಪಟ್ಟಣದ ಭೂತನಗುಡಿ ನಿವಾಸಿಗಳಾದ ಚಂದ್ರಪ್ಪ(80) ಹಾಗೂ ಪತ್ನಿ ಜಯಮ್ಮ(70) ದಂಪತಿಗಳಿಬ್ಬರು ಮನೆಯಲ್ಲಿಯೇ ಅನುಮಾನಾಸ್ಪದವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ