Breaking News

ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ

Spread the love

ದಾವಣಗೆರೆ/ಕೊಡಗು/ ಕೊಪ್ಪಳ : ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಬಿಸಿ ಮುಟ್ಟಿಸಿದ್ದಾರೆ.

ಸರ್ಕಾರಿ ಹುದ್ದೆಯಲ್ಲಿರುವ ದಂಪತಿ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಹೊಳಲ್ಕೆರೆ ಸಣ್ಣ ನೀರಾವರಿ‌ ಇಲಾಖೆ ಇಂಜಿನಿಯರ್ ಕೆ.ಮಹೇಶ್ ಹಾಗೂ ಅವರ ಪತ್ನಿ ಬಿಬಿಎಂಪಿ ಎಇ ಹೆಚ್. ಭಾರತಿ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ.

ಚಿತ್ರದುರ್ಗ ಲೊಕಾಯುಕ್ತ ಎಸ್​ಪಿ ವಾಸುದೇವ್ ರಾಮ್ ಹಾಗೂ ಡಿವೈಎಸ್​ಪಿ ಮೃಂತುಂಜಯ್ಯ ನೇತೃತ್ವದ ತಂಡದಿಂದ ದಾವಣಗೆರೆ ನಗರದ ಜಯನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಲಾಗಿದೆ.

ಚನ್ನಗಿರಿ ಅರಣ್ಯ ಇಲಾಖೆ ಆರ್.ಎಫ್.ಒ ಮನೆ ಮೇಲೂ ದಾಳಿ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅರಣ್ಯ ಇಲಾಖೆ ಅಧಿಕಾರಿ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಬಿಸಿ ಮುಟ್ಟಿಸಿದ್ದಾರೆ. ಚನ್ನಗಿರಿ ಅರಣ್ಯ ಇಲಾಖೆ ಆರ್.ಎಫ್.ಒ ಸತೀಶ್ ಮನೆ ಮೇಲೆ ಮೊದಲು ದಾಳಿ ನಡೆಸಿದ ಅಧಿಕಾರಿಗಳು, ಬಳಿಕ ಶಿವಮೊಗ್ಗದಲ್ಲಿರುವ ನಿವಾಸದ ಮೇಲೂ ದಾಳಿ ಮಾಡಿದ್ದಾರೆ. ದಾವಣಗೆರೆ ಲೋಕಾಯುಕ್ತ ಎಸ್​ಪಿ ಎಂಎಸ್ ಕೌಲಾಪುರೆ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಇನ್ಸ್​ಪೆಕ್ಟರ್ ನಂದೀಶ್ ಹಾಗೂ ಮಧುಸೂಧನ್ ತಂಡದಿಂದ ಶೋಧ ಮಾಡಲಾಗುತ್ತಿದೆ.

ಬಿಬಿಎಂಪಿ ರೆವಿನ್ಯೂ ಇನ್ಸ್‌ಪೆಕ್ಟರ್ ಮನೆ ಮೇಲೆ ದಾಳಿ: ಬಿಬಿಎಂಪಿ ಮಹದೇವಪುರ ವಲಯದ ರೆವಿನ್ಯೂ ಇನ್ಸ್‌ಪೆಕ್ಟರ್ ನಟರಾಜ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ‌. ನಟರಾಜ್ ಅವರ ಬನಶಂಕರಿ ನಿವಾಸ, ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಶಿವನಹಳ್ಳಿ ಗ್ರಾಮದಲ್ಲಿರುವ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ನಟರಾಜ್ ಮಾತ್ರವಲ್ಲದೇ ಬೆಂಗಳೂರಿನ ಹತ್ತಕ್ಕೂ ಹೆಚ್ಚು ಕಡೆ ವಿವಿಧ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದ್ದು, ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ