Breaking News

ಬಾಣಂತಿ ಆರೋಗ್ಯ ವಿಚಾರಿಸಲು ಹೋದ ಸಮುದಾಯ ಆರೋಗ್ಯಾಧಿಕಾರಿ ಮೇಲೆ ನಾಯಿ ದಾಳಿ: ಗಂಭೀರ ಗಾಯ

Spread the love

ಕೊಡಗು : ಬಾಣಂತಿ ಆರೋಗ್ಯ ವಿಚಾರಿಸಲು ಹೋದ ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ನಾಯಿಯೊಂದು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ವಿರಾಜಪೇಟೆ ತಾಲೂಕಿನ ಪಾರಾಣೆ ಗ್ರಾಮದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಕೆ‌ ಕೆ ಭವ್ಯಾ ಮೇಲೆ ಸಾಕು ನಾಯಿಯೊಂದು ದಾಳಿ ಮಾಡಿದೆ.

ಇತ್ತೀಚೆಗೆ ಹೆರಿಗೆ ಆಗಿದ್ದ ತಾಯಿ ಮತ್ತು ಮಗುವಿನ ಆರೋಗ್ಯ ವಿಚಾರಿಸಲು ಪಾರಾಣೆ ಗ್ರಾಮದ ಮಾಚಯ್ಯ ಎಂಬುವರ ಮನೆಗೆ ತೆರಳಿದ್ದ ಸಮುದಾಯ ಆರೋಗ್ಯ ಸಿಬ್ಬಂದಿ, ಔಷಧ ಕೊಟ್ಟು ವಾಪಸ್​ ಬರುವಾಗ ನಾಯಿ ದಾಳಿ ಮಾಡಿದೆ. ದೊಡ್ಡ ನಾಯಿ ಆಗಿರುವ ಕಾರಣ ಅವರಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಕೆಳಗೆ ಬಿದ್ದಾಗ ಭವ್ಯಾ ಅವರ ಕೈ ಸೇರಿದಂತೆ ದೇಹದ ಹಲವು ಭಾಗಗಳಿಗೆ ಕಚ್ಚಿ ಗಾಯಗೊಳಿಸಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಮಗು ಮೇಲೆ ಬೀದಿ ನಾಯಿ ದಾಳಿ : ಮನೆ ಎದುರು ಆಟವಾಡುತ್ತಿದ್ದ ಮಗು ಮೇಲೆ ಬೀದಿನಾಯಿಯೊಂದು ದಾಳಿ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್​ ಪಟ್ಟಣದಲ್ಲಿ ಇದೇ ತಿಂಗಳ 12 ನೇ ತಾರೀಖಿನಂದು ನಡೆದಿತ್ತು. 17 ನೇ ವಾರ್ಡ್​ನಲ್ಲಿ ಮನೆ ಮುಂದೆ ಐದಾರು ಮಕ್ಕಳು ಆಟವಾಡುತ್ತಿದ್ದಾಗ ನಾಲ್ಕು ವರ್ಷದ ಮಗುವಿನ ಮೇಲೆ ಏಕಾಏಕಿ ಬೀದಿ ನಾಯಿ ದಾಳಿ ನಡೆಸಿತ್ತು. ಪರಿಣಾಮ ಸುಪ್ರಿಯಾ ಎಂಬ ಮಗುವಿಗೆ ಗಂಭೀರವಾಗಿ ಗಾಯವಾಗಿತ್ತು.

ನಾಯಿ ದಾಳಿ ನಡೆಸಿದ ವೇಳೆ ಜೊತೆಗಿದ್ದ ಇತರ ಮಕ್ಕಳು ಕಿರುಚಾಡಿದ್ದಾರೆ. ಮಕ್ಕಳ ಕಿರುಚಾಟ ಕೇಳಿ ಅಲ್ಲಿಯೇ ಇದ್ದ ವ್ಯಕ್ತಿಯೊಬ್ಬರು ಮಗುವಿನ ಬಳಿ ಓಡಿ ಬಂದು ನಾಯಿಯಿಂದ ಪಾರು ಮಾಡಿದ್ದಾರೆ. ಅಷ್ಟೊತ್ತಿಗಾಗಲೇ ಬೀದಿ ನಾಯಿ ಮಗುವನ್ನು ಕಚ್ಚಿ ಗಾಯಗೊಳಿಸಿತ್ತು. ನಾಯಿ ದಾಳಿ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ