Breaking News

ಗಡಿ ವಿವಾದ  ವಿಚಾರವಾಗಿ ಕರ್ನಾಟಕದೊಂದಿಗೆ ಚರ್ಚಿಸುವಂತೆ ಶಿವಸೇನೆ ಮಹಾರಾಷ್ಟ್ರದ ರಾಜ್ಯಪಾಲರಿಗೆ ಆಗ್ರಹಿ

Spread the love

ಮುಂಬೈ: ಗಡಿ ವಿವಾದ  ವಿಚಾರವಾಗಿ ಕರ್ನಾಟಕದೊಂದಿಗೆ ಚರ್ಚಿಸುವಂತೆ ಶಿವಸೇನೆ ಮಹಾರಾಷ್ಟ್ರದ ರಾಜ್ಯಪಾಲರಿಗೆ ಆಗ್ರಹಿಸಿದೆ.

ಶಿವಸೇನೆ ಮುಖವಾಣಿ ಸಾಮ್ನಾ ಪತ್ರಿಕೆಯ ಸಂಪಾದಕೀಯದಲ್ಲಿ ಗಡಿ ವಿಚಾರ ರಾಜ್ಯಪಾಲರು ಕರ್ನಾಟಕದೊಂದಿಗೆ ಚರ್ಚಿಸುವಂತೆ ಬರೆದಿದ್ದು,   ಡಿಸಿಎಂ ಲಕ್ಷ್ಮಣ ಸವದಿ ಅವರ ಸೂರ್ಯ, ಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ  ಹೇಳಿಕೆ ಪ್ರಸ್ತಾಪಿಸಿದೆ.

ಮರಾಠಿ ಭಾಷಿಕರ ಮೇಲೆ ಈ ಭಾಗದಲ್ಲಿ ಕಳೆದ 60 ವರ್ಷಗಳಿಂದ ದೌರ್ಜನ್ಯ ನಡೆಯುತ್ತಿದೆ. ಕರ್ನಾಟಕ ಇದನ್ನು ನಿಭಾಯಿಸುತ್ತಿರುವ ಕ್ರಮ ಈ ಜನರಲ್ಲಿ ಆಕ್ರೋಶ ಮೂಡಿಸಿದೆ ಎಂದು ಶಿವಸೇನೆ ಸಂಪಾದಕೀಯದಲ್ಲಿ ಆರೋಪಿಸಿದೆ.

ಬೆಳಗಾವಿ, ಬೀದರ್ ಜಿಲ್ಲೆಯ   ಗಡಿ ಪ್ರದೇಶ ಕುರಿತಂತೆ ಕರ್ನಾಟಕ -ಮಹಾರಾಷ್ಟ್ರ ನಡುವಣ ವಿವಾದ ಸದ್ಯ ಸುಪ್ರೀಂ ಕೋರ್ಟ್‌ನಲ್ಲಿದೆ. ಆಗಸದಲ್ಲಿ ಸೂರ್ಯ, ಚಂದ್ರ ಇದೆಯೋ ಎಂಬುದನ್ನು ನೋಡಿ ಕೋರ್ಟ್ ಆದೇಶಿಸುವುದಿಲ್ಲ ಎಂದು ಶಿವಸೇನೆ ಹೇಳಿದೆ.

ಮಹಾರಾಷ್ಟ್ರ ರಾಜ್ಯಪಾಲರು ಈ ಕುರಿತು ಕರ್ನಾಟಕ ರಾಜ್ಯಪಾಲರ ಜೊತೆಗೆ ಚರ್ಚಿಸಬೇಕು. ಕನಿಷ್ಠ ಬೆಳಗಾವಿಯ ನಿಯೋಗ ಪ್ರಧಾನಿಯನ್ನು ಭೇಟಿ ಮಾಡಲು ಸಮಯಾವಕಾಶ ನಿಗದಿಪಡಿಸಲಾದರೂ ನೆರವು ನೀಡಬೇಕು ಎಂದು ಒತ್ತಾಯಿಸಿದೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ