Breaking News

ಮೂಲಸೌಕರ್ಯದ ಕೊರತೆಯಿಂದಾಗಿ 13 ಸರ್ಕಾರಿ ಶಾಲೆಗಳಿಗೆ ಬೀಗ

Spread the love

ಚಾಮರಾಜನಗರ: ಮೂಲಸೌಕರ್ಯದ ಕೊರತೆಯಿಂದಾಗಿ ಗಡಿಜಿಲ್ಲೆ ಚಾಮರಾಜನಗರದಲ್ಲಿ ಹಲವು ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚುವ ಹಂತ ತಲುಪಿವೆ. 2023-24ನೇ ಶೈಕ್ಷಣಿಕ ಸಾಲಿನಲ್ಲಿ ಮೂಲಸೌಕರ್ಯ ಕೊರತೆ, ಶಿಕ್ಷಕರ ಕೊರತೆ, ಶಿಥಿಲ ಶಾಲಾ ಕಟ್ಟಡಗಳಿಂದ ಆತಂಕಗೊಂಡು ಮಕ್ಕಳ ಶೂನ್ಯ ದಾಖಲಾತಿಯಿಂದಾಗಿ ಜಿಲ್ಲೆಯಲ್ಲಿ ಒಟ್ಟು 13 ಸರ್ಕಾರಿ ಶಾಲೆಗಳಿಗೆ ಬೀಗ ಹಾಕಲಾಗಿದೆ. ಈ ಪೈಕಿ ಒಂದು ಉರ್ದು ಮಾಧ್ಯಮದ ಶಾಲೆಯೂ ಸೇರಿದೆ.

ಕೋವಿಡ್ ವೇಳೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ದಿಢೀರ್ ಏರಿಕೆ ಆಗಿತ್ತು. ಆದರೆ ಪ್ರಸಕ್ತ ವರ್ಷದಲ್ಲಿ ಮೂಲಸೌಕರ್ಯ ಅವ್ಯವಸ್ಥೆ ಹಾಗೂ ಶಿಕ್ಷಕರ ಕೊರತೆಯಿಂದ ಮಕ್ಕಳು ಖಾಸಗಿ ಶಾಲೆಗಳತ್ತ ಮುಖ ಮಾಡಿದ್ದಾರೆ. ಖಾಸಗಿ ಶಾಲೆಗಳಲ್ಲಿ ಸಿಗುವ ಶಿಕ್ಷಣದಿಂದ ಪೋಷಕರು ಪ್ರಭಾವಿತರಾಗಿದ್ದು, ಮಕ್ಕಳನ್ನು ದುಬಾರಿ ಶುಲ್ಕ ನೀಡಿಯಾದರೂ ದಾಖಲಾತಿ ಮಾಡಿದ್ದಾರೆ.

ತಮಿಳುನಾಡು ಹಾಗೂ ಕೇರಳ ಎರಡೂ ಗಡಿ ಹಂಚಿಕೊಂಡಿರುವ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳಿಗೆ ಸಿಗಬೇಕಾದ ಉತ್ತೇಜನ ಸಿಗದಿರುವುದರಿಂದ ಈ ಪರಿಸ್ಥಿತಿ ಉಂಟಾಗಿದೆ. ರಾಜ್ಯ ಸರ್ಕಾರ ಕನ್ನಡ ಪ್ರಾಥಮಿಕ ಶಾಲೆಗಳತ್ತ ಮಕ್ಕಳನ್ನು ಸೆಳೆಯಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆದರೆ, ಶಾಲೆಗಳಲ್ಲಿ ಮೂಲಸೌಕರ್ಯ, ಶಿಕ್ಷಕರ ಕೊರತೆ ಹಾಗೂ ಉತ್ತಮ ಶಿಕ್ಷಣ ದೊರಕುತ್ತಿಲ್ಲ ಎಂದು ಜಿಲ್ಲೆಯ ಜನರ ಆರೋಪ.

ಕೋವಿಡ್ ಲಾಕ್‌ಡೌನ್ ವೇಳೆ ಖಾಸಗಿ ಶಾಲೆಗಳಿಗೆ ಹೆಚ್ಚು ಶುಲ್ಕ ಭರಿಸಲಾಗದೇ ಖಾಸಗಿ ಶಾಲೆಗಳಿಂದ ದಾಖಲೆ ಮಟ್ಟದಲ್ಲಿ ಮಕ್ಕಳು ಸರ್ಕಾರಿ ಶಾಲೆಗಳಿಗೆ ಸೇರಿದ್ದರು. ಈಗ ಪರಿಸ್ಥಿತಿ ವ್ಯತಿರಿಕ್ತ. ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ, ಸಮರ್ಪಕ ಶಿಕ್ಷಣ ಸಿಗದಿದ್ದಕ್ಕೆ ಬೇಸತ್ತು ಜಿಲ್ಲೆಯ 13 ಶಾಲೆಗಳಲ್ಲಿ ಶೂನ್ಯ ದಾಖಲಾತಿಗೆ ಬಂದು ತಲುಪಿವೆ. ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳು ಶೂನ್ಯ ದಾಖಲಾತಿಯತ್ತ ಸಾಗುತ್ತಿರುವುದು ಚಾಮರಾಜನಗರ ಜಿಲ್ಲೆಯಲ್ಲಿ ಕಳವಳಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ