Breaking News

ಅನಾರೋಗ್ಯದಿಂದ ಸಾವನ್ನಪ್ಪಿದ್ದಾನೆ ಅಂದುಕೊಂಡ ಮಗು ಅಂತ್ಯಸಂಸ್ಕಾರ ಮಾಡುವ ವೇಳೆ ಜೀವಂತ

Spread the love

ಧಾರವಾಡ: ಮೃತಪಟ್ಟಿದ್ದಾನೆ ಅಂದುಕೊಂಡಿದ್ದ ಮಗುವೊಂದು ಸ್ಮಶಾನದಲ್ಲಿ ಅಂತ್ಯಸಂಸ್ಕಾರ ಮಾಡುವಾಗ ಜೀವಂತವಾಗಿರುವುದು ಗೊತ್ತಾದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬಸಾಪುರ ಗ್ರಾಮದಲ್ಲಿ ನಡೆದಿದೆ.

ಒಂದೂವರೆ ವರ್ಷದ ಆಕಾಶ ಬಸವರಾಜ ಪೂಜಾರ ಎಂಬ ಮಗು ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿತ್ತು. ಮಗುವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ ಎಂದು ಕಿಮ್ಸ್ ವೈದ್ಯರು ಹೇಳಿದ್ದರು.

ಹೀಗಾಗಿ ಆಕಾಶನನ್ನು ಊರಿನಲ್ಲಿಯೇ ಅಂತ್ಯಕ್ರಿಯೆ ಮಾಡಲು ಪಾಲಕರು ಬಸಾಪುರ ಗ್ರಾಮಕ್ಕೆ ತೆಗೆದುಕೊಂಡು ಬಂದಿದ್ದಾರೆ. ಅಲ್ಲದೇ ಸ್ಮಶಾನದಲ್ಲಿ ಅಂತ್ಯಕ್ರಿಯೆಯ ಅಂತಿಮ ವಿಧಿ ವಿಧಾನ ಕೂಡ ನಡೆದಿತ್ತು. ಇನ್ನೇನು ಮೃತ ಮಗುವಿನ ಬಾಯಲ್ಲಿ ಎರಡು ಹನಿ ನೀರು ಹಾಕುತ್ತಿದ್ದಂತೆ ಉಸಿರಾಡಿದೆ. ಕೂಡಲೇ ಪೋಷಕರು ಮಗು ಬದುಕುಳಿದಿರುವುದನ್ನು ಕಂಡು ನವಲಗುಂದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ವೆಂಟಿಲೇಟರ್​ ಕೊರತೆಯಿಂದ ಸದ್ಯ ಆಕಾಶನನ್ನು ಮತ್ತೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಈ ಪ್ರಕರಣ ಎಲ್ಲರ ಅಚ್ಚರಿಗೆ ಕಾರಣವಾಗಿದೆ.

ವೈದ್ಯರ ಸ್ಪಷ್ಟನೆ: ಮಗು ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ನಾವು ಯಾವುದೇ ಸರ್ಟಿಫಿಕೆಟ್ ಕೊಟ್ಟಿಲ್ಲ. ಮಗು ಜೀವಂತ ಇರುವಾಗಲೇ ಸಂಬಂಧಿಕರು ಡಿಸ್ಚಾರ್ಜ್​ ಮಾಡಿಸಿಕೊಂಡು ಹೋಗಿದ್ದಾರೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರಥಾನಿ ಹೇಳಿದ್ದಾರೆ.

 


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ