Breaking News

6 ತಿಂಗಳಿನಿಂದ 5 ವರ್ಷಗಳವರೆಗೆ ನೂರಾರು ತಕರಾರು ಪ್ರಕರಣಗಳು ಬಾಕಿ ಉಳಿದಿವೆ. ಈ ಎಲ್ಲ ಪ್ರಕರಣಗಳನ್ನು 4 ತಿಂಗಳ ಕಾಲಮಿತಿಯಲ್ಲಿ ಇತ್ಯರ್ಥಪಡಿಸಬೇಕು ಎಂದ ಕಂದಾಯ ಸಚಿವ

Spread the love

ಬೆಂಗಳೂರು: ತಹಶೀಲ್ದಾರ್, ಎಸಿ ಹಾಗೂ ಡಿಸಿ ಮಟ್ಟದ ನ್ಯಾಯಾಲಯಗಳಲ್ಲಿ 6 ತಿಂಗಳಿನಿಂದ 5 ವರ್ಷಗಳವರೆಗೆ ನೂರಾರು ತಕರಾರು ಪ್ರಕರಣಗಳು ಬಾಕಿ ಉಳಿದಿವೆ. ಈ ಎಲ್ಲ ಪ್ರಕರಣಗಳನ್ನು 4 ತಿಂಗಳ ಕಾಲಮಿತಿಯಲ್ಲಿ ಇತ್ಯರ್ಥಪಡಿಸಬೇಕು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ.

ವಿಕಾಸಸೌಧದಲ್ಲಿ ಇಂದು ಆಯೋಜಿಸಲಾಗಿದ್ದ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಸಚಿವರು, “ಕಳೆದ ಐದು ವರ್ಷಗಳಿಂದ ಇತ್ಯರ್ಥವಾಗದ ತಕರಾರು ಪ್ರಕರಣಗಳನ್ನು ಶೀಘ್ರದಲ್ಲೇ ವಿಲೇವಾರಿಗೊಳಿಸಿ ಎಂದು ಅಧಿಕಾರಿಳಿಗೆ ನಿರ್ದೇಶನ ಕೊಟ್ಟರು. ಬೆಂಗಳೂರು ಪ್ರಾದೇಶಿಕ ವಿಭಾಗದ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ 6 ತಿಂಗಳಿಂದ 5 ವರ್ಷಗಳವರೆಗಿನ ಒಟ್ಟು 6,859 ತಕರಾರು ಪ್ರಕರಣಗಳು ಈವರೆಗೆ ಇತ್ಯರ್ಥವಾಗದೆ ಬಾಕಿ ಉಳಿದಿವೆ. 4,000 ಪ್ರಕರಣಗಳನ್ನು ಮುಂದಿನ 4 ತಿಂಗಳೊಳಗಾಗಿ ಇತ್ಯರ್ಥಗೊಳಿಸಬೇಕು” ಎಂದು ತಿಳಿಸಿದರು.

ಉಪ ವಿಭಾಗಾಧಿಕಾರಿ-ಜಿಲ್ಲಾಧಿಕಾರಿಗಳ ವಿರುದ್ಧ ಅಸಮಾಧಾನ: ಬೆಂಗಳೂರು ಪ್ರಾದೇಶಿಕ ವಿಭಾಗದ ಉಪ ವಿಭಾಗಾಧಿಕಾರಿ (ಎಸಿ) ಹಾಗೂ ಜಿಲ್ಲಾಧಿಕಾರಿ (ಡಿಸಿ) ನ್ಯಾಯಾಲಯಗಳಲ್ಲೂ ಸಾಕಷ್ಟು ತಕರಾರು ಪ್ರಕರಣಗಳು ಬಾಕಿ ಉಳಿದಿದ್ದು, ಸಭೆಯಲ್ಲಿ ಸಚಿವರು ತೀವ್ರ ಅಸಮಾಧಾನ ಹೊರಹಾಕಿದರು. ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳ ಪೈಕಿ ದೊಡ್ಡಬಳ್ಳಾಪುರ 5,683, ಬೆಂಗಳೂರು ದಕ್ಷಿಣ 6,129, ಬೆಂಗಳೂರು ಉತ್ತರ 6,035, ಚಿಕ್ಕಬಳ್ಳಾಪುರ 3,014, ಚಿತ್ರದುರ್ಗ 1,374, ದಾವಣಗೆರೆ 152, ಹೊನ್ನಾಳ್ಳಿ 456, ಕೋಲಾರ 5,112, ರಾಮಮನಗರ 4,210, ಶಿವಮೊಗ್ಗ 613, ಸಾಗರ 411, ತುಮಕೂರು 7,354, ಮಧುಗಿರಿ 3,167 ಮತ್ತು ತಿಪಟೂರಿನ 742 ಪ್ರಕರಣಗಳು ಸೇರಿದಂತೆ ಒಟ್ಟಾರೆಯಾಗಿ 45,482 ಪ್ರಕರಣಗಳು ಬಾಕಿ ಇವೆ.

ಜಿಲ್ಲಾಧಿಕಾರಿ ನ್ಯಾಯಾಲಯಗಳ ಪೈಕಿ ಬೆಂಗಳೂರು ಗ್ರಾಮಾಂತರ 1384, ಬೆಂಗಳೂರು ನಗರ 4974, ಚಿಕ್ಕಬಳ್ಳಾಪುರ 429, ಚಿತ್ರದುರ್ಗ 1711, ದಾವಣಗೆರೆ 81, ಕೋಲಾರ 102, ರಾಮನಗರ 501, ಶಿವಮೊಗ್ಗ 73, ತುಮಕೂರಿನ 697 ಸೇರಿದಂತೆ ಒಟ್ಟಾರೆಯಾಗಿ 10,065 ಪ್ರಕರಣಗಳು ಬಾಕಿ ಇವೆ. ಪರಿಶೀಲನೆಯ ವೇಳೆ ಎಸಿ-ಡಿಸಿ ನ್ಯಾಯಾಲಯಗಳಲ್ಲೂ ಬಾಕಿ ಇರುವ ಪ್ರಕರಣಗಳ ಬಗ್ಗೆ ಅಸಮಾಧಾನ ಹೊರಹಾಕಿದ ಸಚಿವರು, “ಉನ್ನತ ಅಧಿಕಾರಿಗಳೇ ತಮ್ಮ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಇತ್ಯರ್ಥಪಡಿಸದಿದ್ದರೆ, ತಹಶೀಲ್ದಾರರಿಂದ ನೀವು ಹೇಗೆ ಪರಿಣಾಮಕಾರಿ ಕೆಲಸವನ್ನು ನಿರೀಕ್ಷೆ ಮಾಡಲು ಸಾಧ್ಯ. ಹೀಗಾಗಿ ನೀವು ಇತರರಿಗೆ ತಪ್ಪು ಉದಾಹರಣೆಯಾಗಬೇಡಿ” ಎಂದು ಸಲಹೆ ನೀಡಿದರು.

ಅಲ್ಲದೆ, “ಉಪ ವಿಭಾಗಾಧಿಕಾರಿಗಳು ಸಿವಿಲ್ ತಕರಾರು ಪ್ರಕರಣಗಳನ್ನು ಮುಂದಿನ ಒಂದು ತಿಂಗಳಲ್ಲಿ ಇತ್ಯರ್ಥಪಡಿಸಬೇಕು. ಜಿಲ್ಲಾಧಿಕಾರಿಗಳು ತಮ್ಮ ಬಳಿಯ ಪ್ರಕರಣಗಳನ್ನು ವಿಭಾಗಿಸಿ ಈ ಪ್ರಕರಣಗಳನ್ನು ಎಷ್ಟು ದಿನಗಳಲ್ಲಿ ಮುಗಿಸಬಹುದು ಎಂದು ನಿರ್ಧರಿಸಬೇಕು ಹಾಗೂ ಸಣ್ಣಪುಟ್ಟ ಪ್ರಕರಣಗಳನ್ನು ಕೋರ್ಟ್ ಅದಾಲತ್ ಮೂಲಕ ಬಗೆಹರಿಸಬೇಕು. ಪ್ರಕರಣಕ್ಕೆ ಸಂಬಂಧಪಟ್ಟವರನ್ನು ಕರೆತರುವ ಜವಾಬ್ದಾರಿಯನ್ನು ಆಯಾ ರಾಜಸ್ವ ನಿರೀಕ್ಷಕರಿಗೆ (ರೆವೆನ್ಯೂ ಇನ್ಸ್ಪೆಕ್ಟರ್)ಗ ವಹಿಸಬೇಕು” ಎಂದು ಸಭೆಯಲ್ಲಿ ಸೂಚಿಸಿದರು.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ