Breaking News

ಬೆಳಗಾವಿ: ಆಸ್ತಿಗಾಗಿ ಉಪ್ಪಿಟ್ಟಿನಲ್ಲಿ ಗಂಡನಿಗೆ ವಿಷ ಹಾಕಿದ ಪತ್ನಿ; ಪತಿ ಐಸಿಯುಗೆ, ನಾಯಿ-ಬೆಕ್ಕು ಸಾವು

Spread the love

ಬೆಳಗಾವಿ: ಎರಡು ಎಕರೆ ಜಮೀನನ್ನು ತಮ್ಮ ಹೆಸರಿಗೆ ಮಾಡಿಸಿಕೊಳ್ಳುವ ಉದ್ದೇಶದಿಂದ ಮಹಿಳೆಯೊಬ್ಬಳು, ತನ್ನ ಪತಿಗೆ ಉಪ್ಪಿಟ್ಟಿನಲ್ಲಿ ವಿಷ ಹಾಕಿ ಕೊಲೆಗೆ ಯತ್ನಿಸಿದ ಪ್ರಕರಣ ಪತ್ತೆ ಹಚ್ಚುವಲ್ಲಿ ಸವದತ್ತಿ ಪೊಲೀಸರು ಯಶಸ್ವಿಯಾಗಿದ್ದಾರೆ.

 

ವಿಷಪೂರಿತ ಉಪ್ಪಿಟ್ಟು ಸೇವಿಸಿ ಅಸ್ವಸ್ಥರಾಗಿದ್ದ ಸವದತ್ತಿ ತಾಲೂಕಿನ ಗೋರಾಬಾಳ ಗ್ರಾಮದ ನಿಂಗಪ್ಪ ಫಕೀರಪ್ಪ ಹಮಾನಿ (35) ಅವರನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಪತ್ನಿ ಸಾವಕ್ಕ (32) ಹಾಗೂ ಇವರ ಸಹೋದರ ಫಕೀರಪ್ಪ ಲಕ್ಷ್ಮಣ ಸಿಂಧೋಗಿ (30) ಕೊಲೆಗೆ ಯತ್ನಿಸಿದ ಆರೋಪಿಗಳಾಗಿದ್ದಾರೆ.

ಆಗಸ್ಟ್‌ 11ರಂದು ಬೆಳಗ್ಗೆ ಸಾವಕ್ಕ ಪತಿ ನಿಂಗಪ್ಪಗೆ ಉಪಹಾರಕ್ಕಾಗಿ ಉಪ್ಪಿಟ್ಟು ಮಾಡಿದ್ದರು. ಅದನ್ನು ತಿಂದ ಕೆಲವೇ ಗಂಟೆಗಳಲ್ಲಿ ನಿಂಗಪ್ಪ ತೀವ್ರ ಅಸ್ವಸ್ಥರಾಗಿದ್ದರು. ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದು, ವೈದ್ಯರ ಸಲಹೆ ಮೇರೆಗೆ ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಿದ್ದರು. ಸದ್ಯ ತೀವ್ರ ನಿಗಾ ಘಟಕದಲ್ಲಿ ನಿಂಗಪ್ಪಗೆ ಚಿಕಿತ್ಸೆ ಮುಂದುವರಿದಿದೆ.

ಇದೇ ಉಪ್ಪಿಟ್ಟು ತಿಂದಿದ್ದ ಒಂದು ನಾಯಿ, ಒಂದು ಬೆಕ್ಕು ಸಾವನ್ನಪ್ಪಿವೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಮಾಹಿತಿ ನೀಡಿದರು. ನಿಂಗಪ್ಪ ಅವರ ತಂದೆ ಫಕೀರಪ್ಪ ನೀಡಿದ ದೂರಿನ ಮೇರೆಗೆ ಸವದತ್ತಿ ಪೊಲೀಸರು ತನಿಖೆ ನಡೆಸಿದ್ದಾರೆ.

ಆಕಸ್ಮಿಕವಾಗಿ ನೀರಿಗೆ ಬಿದ್ದ ವ್ಯಕ್ತಿ: ಸವದತ್ತಿಯ ಜೋಗುಳಬಾವಿ ಸತ್ಯಮ್ಮ ದೇವಸ್ಥಾನದ ಬಳಿಯ ಜೋಗುಳಬಾವಿಯಲ್ಲಿ ಇಂದು ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ನೀರಿಗೆ ಬಿದ್ದಿರುವ ಘಟನೆ ನಡೆಯಿತು. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಡ ಗ್ರಾಮದ ವಿನಾಯಕಸಿಂಗ್ ರಜಪೂತ (35) ನೀರು ಪಾಲಾದ ವ್ಯಕ್ತಿ.

 ನೀರಿಗೆ ಬಿದ್ದ ವ್ಯಕ್ತಿಗಾಗಿ ಶೋಧಕಾರ್ಯ‌ವಿನಾಯಕ ಸಿಂಗ್‌ ಶ್ರಾವಣ ಮಾಸದ ಪೂಜೆಗಾಗಿ ಕುಟುಂಬಸಮೇತರಾಗಿ ಯಲ್ಲಮ್ಮನಗುಡ್ಡ ಮತ್ತು ಸತ್ಯಮ್ಮ ದೇವಸ್ಥಾನಗಳಿಗೆ ಬಂದಿದ್ದರು. ದೇವಾಲಯಗಳಿಗೆ ತೆರಳುವ ಮೊದಲು ಜೋಗುಳ ಬಾವಿಯಲ್ಲಿ ಸ್ನಾನ ಮಾಡುವುದು ವಾಡಿಕೆ. ಹೀಗೆ ಸ್ನಾನಕ್ಕಿಳಿದ ವಿನಾಯಕ ಸಿಂಗ್‌, ಬಾವಿಯ ಒಂದು ಬದಿಯಿಂದ ಇನ್ನೊಂದು ಬದಿಗೆ ಈಜಿಕೊಂಡು ಹೋದರು. ಮರಳಿ ಬರುವಾಗ ಈಜಲಾರದೇ ಮಧ್ಯದಲ್ಲೇ ಮುಳುಗಿದ್ದಾರೆ. ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಈಜುಗಾರರ ನೆರವಿನೊಂದಿಗೆ ಶೋಧಕಾರ್ಯ‌ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ನಿವೃತ್ತ ಶಿಕ್ಷಕನಿಂದ 80 ಸಾವಿರ ರೂಪಾಯಿ ಮೌಲ್ಯದ ಕಲಿಕಾ ಸಾಮಗ್ರಿ ದೇಣಿಗೆ

Spread the love ಹುಕ್ಕೇರಿ : ನಿವೃತ್ತ ಶಿಕ್ಷಕನಿಂದ 80 ಸಾವಿರ ರೂಪಾಯಿ ಮೌಲ್ಯದ ಕಲಿಕಾ ಸಾಮಗ್ರಿ ದೇಣಿಗೆ ಹುಕ್ಕೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ