Breaking News

ಬಹು ನಿರೀಕ್ಷಿತ ‘ಗೃಹಲಕ್ಷ್ಮಿ’ ಯೋಜನೆಯ ಚಾಲನೆ ಕಾರ್ಯಕ್ರಮ ಇದೀಗ ಬೆಳಗಾವಿಯಿಂದ ಮೈಸೂರಿಗೆ ಶಿಫ್ಟ್

Spread the love

ಬೆಂಗಳೂರು: ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ‘ಗೃಹಲಕ್ಷ್ಮಿ’ ಯೋಜನೆಯ ಚಾಲನೆ ಕಾರ್ಯಕ್ರಮ ಇದೀಗ ಬೆಳಗಾವಿಯಿಂದ ಮೈಸೂರಿಗೆ ಶಿಫ್ಟ್ ಆಗಿದೆ ಮತ್ತು ಯೋಜನೆ ಚಾಲನೆ ದಿನಾಂಕ ಆ.30ಕ್ಕೆ ಮುಂದೂಡಿಕೆಯಾಗಿದೆ.

ಈ ಹಿಂದೆ ಮೂರು ಬಾರಿ ಚಾಲನೆಯ ದಿನಾಂಕ ಮುಂದೂಡಲಾಗಿತ್ತು. ಇದೀಗ ನಾಲ್ಕನೇ ಬಾರಿ ದಿನಾಂಕ ಮುಂದೂಡಿಕೆಯಾಗಿದೆ. ಮೊದಲು ಆಗಸ್ಟ್ ಮೊದಲ‌ ವಾರ, ಬಳಿಕ ಆ. 17 ಅಥವಾ ಆ.18ರಂದು ಯೋಜನೆ ಚಾಲನೆಗೆ ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ ಮತ್ತೆ ದಿನಾಂಕ ಬದಲು ಮಾಡಿ ಆ. 21ಕ್ಕೆ ನಿಗದಿಯಾಗಿತ್ತು. ಬಳಿಕ ಮತ್ತೆ ಬದಲಾವಣೆ ಮಾಡಿ ಆ.27 ಎಂದು ಮರು ನಿಗದಿ ಮಾಡಲಾಗಿತ್ತು‌.

ಬೆಳಗಾವಿಯಲ್ಲಿ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆ ಚಾಲನೆಗೆ ಈ ಮೊದಲು ನಿರ್ಧರಿಸಲಾಗಿತ್ತು. ಆದರೆ ಇದೀಗ ಯೋಜನೆಯ ಚಾಲನೆ ಕಾರ್ಯಕ್ರಮವನ್ನು ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ಮಾಡಲು ನಿರ್ಧರಿಸಲಾಗಿದೆ. ಈ ಮೊದಲು ಬೆಳಗಾವಿಯಲ್ಲಿ ಯೋಜನೆಗೆ ಅದ್ಧೂರಿಯಾಗಿ ಚಾಲನೆ ನೀಡಲು ಸ್ಥಳ ನಿಗದಿ ಮಾಡಲಾಗಿತ್ತು. ಇದರ ಜೊತೆಗೆ ರಾಜ್ಯಾದ್ಯಂತ ವಿಭಾಗವಾರು ಕಾರ್ಯಕ್ರಮಕ್ಕೆ ಏಕ ಕಾಲದಲ್ಲಿ ಚಾಲನೆ ನೀಡಲು ತೀರ್ಮಾನಿಸಲಾಗಿತ್ತು. ಇದೀಗ ಬೆಳಗಾವಿ ಬದಲಿಗೆ ಮೈಸೂರಿಗೆ ಕಾರ್ಯಕ್ರಮ ಶಿಫ್ಟ್ ಆಗಿದೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು?: ಆಗಸ್ಟ್ 30ರಂದು ಮೈಸೂರಿನಲ್ಲಿ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಚಾಮುಂಡೇಶ್ವರಿ ತಾಯಿಯ ಕ್ಷೇತ್ರದಲ್ಲಿ ಈ ಯೋಜನೆಗೆ ಚಾಲನೆ ಸಿಗುತ್ತಿರುವುದು ನನ್ನ ಅದೃಷ್ಟ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.


Spread the love

About Laxminews 24x7

Check Also

ಐನಾಪೂರ ಗ್ರಾಮದ ಕಾರಿಮಠ ವಸತಿ ಪ್ರದೇಶದ ವಾಲ್ಮೀಕಿ ನಾಯಕ ಸಮುದಾಯದವರಿಂದ ಸನ್ಮಾನ

Spread the loveಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದಲ್ಲಿ ಇಂದು ಸನ್ಮತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿನೋದ್ ಬರಗಾಲೆ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ