Breaking News

ಹಸ್ತಕ್ಕೆ ಆಪರೇಷನ್ ಹೇಗೆ ಮಾಡಬೇಕೆಂದು ನಮಗೆ ಗೊತ್ತಿದೆ”: ಸಿ.ಟಿ.ರವಿ

Spread the love

ಬೆಂಗಳೂರು: “ರಾಜ್ಯ ಕಾಂಗ್ರೆಸ್ ಸರ್ಕಾರವು ಅತಿಯಾಗಿ ವರ್ತಿಸಿದರೆ ಹಸ್ತಕ್ಕೆ ಆಪರೇಷನ್ ಹೇಗೆ ಮಾಡಬೇಕೆಂದು ನಮಗೆ ಗೊತ್ತಿದೆ” ಎಂದು ಬಿಜೆಪಿ ಮಾಜಿ ರಾಷ್ಟ್ರ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಎಚ್ಚರಿಕೆ ನೀಡಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಹಸ್ತಕ್ಕೆ ಆಪರೇಷನ್ ಮಾಡಿದರೆ ಏನಾಗುತ್ತದೆ ಎಂಬುದನ್ನು ನಾನೀಗ ಹೇಳುವುದಿಲ್ಲ. ನಮಗೆ ಹಿಂದೆ 104 ಸೀಟು ಬಂದಿತ್ತು. ಯಾರಿಗೂ ಬಹುಮತ ಇರಲಿಲ್ಲ. ಕಾಂಗ್ರೆಸ್- ಜೆಡಿಎಸ್ ಸೇರಿ ಸರ್ಕಾರ ನಡೆಸಿದ್ದವು. 3 ತಿಂಗಳಿಗೇ ನಿಮ್ಮದು ಅಧ್ವಾನ ಆಗಿತ್ತು. ಒಬ್ಬರಿಗೆ ಒಬ್ಬರನ್ನು ಕಂಡರೆ ಆಗದ ಸ್ಥಿತಿ ಇತ್ತು. ಅದರ ಪರಿಣಾಮವಾಗಿ ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ಆದರೂ ಎರಡೂ ಪಕ್ಷಗಳು ಹೀನಾಯವಾಗಿ ಸೋತಿದ್ದವು” ಎಂದು ಹೇಳಿದರು.

“ಅನಿಶ್ಚಿತತೆ, ಅರಾಜಕೀಯ ಪರಿಸ್ಥಿತಿ ಬಂದಾಗ ಶಾಸಕರಿಗೆ ಬಿಜೆಪಿಯೇ ಪರ್ಯಾಯ ಎನಿಸಿತ್ತು. ಈಗ ಪೂರ್ಣ ಬಹುಮತ ಇದೆ. ಅತಿಯಾಗಿ ಮಾಡಲು ಹೋದರೆ ಪರಿಸ್ಥಿತಿ ಕೆಟ್ಟದ್ದಾಗಲಿದೆ. ಕಾಂಗ್ರೆಸ್ ಪಕ್ಷ ಸಂಪೂರ್ಣ ಬಹುಮತ ಪಡೆದು ಆಡಳಿತ ನಡೆಸುತ್ತಿದೆ. ಒಳ್ಳೆಯ ಆಡಳಿತ ನಡೆಸುವ ಗುರಿ ಇಟ್ಟುಕೊಳ್ಳಬೇಕು. ಇಲ್ಲದೇ ಇರುವುದನ್ನು ಮಾಡಲು ಹೊರಟರೆ ಸುಮ್ಮನೆ ಕುಳಿತುಕೊಳ್ಳುವವರು ನಾವಲ್ಲ. ನಾವೇನಾದರೂ ಮಾಡಿದರೆ ಮೇಲೇಳಲು ಆಗಲ್ಲ. ನಾವೇನು ಮಾಡುತ್ತೇವೆಂದು ಹೇಳುವುದಿಲ್ಲ. ಮುಟ್ಟಿನೋಡುವಂತೆ ಮಾಡುತ್ತೇವೆ” ಎಂದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ