Breaking News

ಹಿಂದಿ ಪ್ರಚಾರ ಸಭಾದಲ್ಲಿ ಅನುದಾನ ದುರ್ಬಳಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಆರಂಭಿಸಿದೆ.

Spread the love

ಧಾರವಾಡ: ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಕರ್ನಾಟಕ ಪ್ರಾಂತದ ಕಚೇರಿಗಳಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ಶುರು ಮಾಡಿದೆ. ಕಳೆದೊಂದು ವಾರದಿಂದ ಬೀಡುಬಿಟ್ಟಿರುವ ತನಿಖಾಧಿಕಾರಿಗಳು ಧಾರವಾಡದ ಹಿಂದಿ ಪ್ರಚಾರ ಸಭಾದ 50ಕ್ಕೂ ಹೆಚ್ಚು ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಕೇಂದ್ರ‌ ಸರ್ಕಾರದ 22 ಕೋಟಿ ರೂ.ಗೂ ಹೆಚ್ಚು ಹಣ ದುರ್ಬಳಕೆ ಮಾಡಿರುವ ಆರೋಪವನ್ನು ಪ್ರಚಾರ ಸಭಾ ಎದುರಿಸುತ್ತಿದೆ. ಪ್ರಕರಣವನ್ನು ಕೇಂದ್ರ ಸರ್ಕಾರ ಸಿಬಿಐ ತನಿಖೆಗೆ ವಹಿಸಿತ್ತು. ಸಿಬಿಐ ತಂಡವು ಸಭಾದ ವಿವಿಧ ವ್ಯಾಪ್ತಿಯಲ್ಲಿ ವಿಚಾರಣೆ ನಡೆಸುತ್ತಿದೆ. ನೂರಾರು ಫೈಲ್‌ಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದೆ. ಧಾರವಾಡ ಪ್ರಾಂತ ಕಚೇರಿ ಗೋವಾ ವ್ಯಾಪ್ತಿ ಹೊಂದಿದೆ. ಅಲ್ಲಿಗೂ ಸಹ ತೆರಳಿ ತನಿಖೆ ಕೈಗೊಂಡಿದೆ. ಗೋವಾ ಹಾಗೂ ಮೈಸೂರಿನಲ್ಲಿ ಹಳೆಯ ಆಡಳಿತ ಮಂಡಳಿ ಕೆಲವು ಆಸ್ತಿ ಮಾರಾಟ ಮಾಡಿ, ಹಣ ದುರ್ಬಳಕೆ ಮಾಡಿಕೊಂಡ ಆರೋಪದ ತನಿಖೆ ನಡೆಯುತ್ತಿದೆ.

2004ರಿಂದ 2020ರವರೆಗಿನ ಆಡಳಿತ ಮಂಡಳಿಯ ಅವಧಿಯಲ್ಲಿ ನಡೆದ ಅನುದಾನ ದುರ್ಬಳಕೆ ಬಗ್ಗೆ ತನಿಖೆ ನಡೆಯುತ್ತಿದೆ. ಅಡಿಟ್ ಮತ್ತು ಅಕೌಂಟ್ ಡಿಟೇಲ್ಸ್‌ನಲ್ಲಿ ಅನೇಕ ವ್ಯತ್ಯಾಸ ಕಂಡುಬಂದಿದ್ದು, ಪ್ರತಿ ಫೈಲ್ ಅನ್ನೂ ಸಿಬಿಐ ಶೋಧಿಸುತ್ತಿದೆ.

ಸಿಬಿಐ ಕರ್ನಾಟಕ ಪ್ರಾಂತದ ಎಲ್ಲ ಶಾಲಾ, ಕಾಲೇಜು‌ಗಳಿಗೂ ತೆರಳಿ ಪರಿಶೀಲನೆ ಮಾಡುತ್ತಿದೆ. ಹಿಂದಿನ ಆಡಳಿತ ಮಂಡಳಿಯ ಸದಸ್ಯರು ಭಾಗಿಯಾದ ಬಗ್ಗೆ ಮಾಹಿತಿ ಕಲೆಹಾಕುತ್ತಿದೆ. ಅನೇಕ ನಿವೃತ್ತರನ್ನೂ ಕರೆಯಿಸಿ ವಿಚಾರಣೆಗೊಳಪಡಿಸುತ್ತಿದೆ. ಈ ಹಿಂದೆ ಕೇಂದ್ರ ಸರ್ಕಾರ ಹಿಂದಿ ಪ್ರಸಾರ ಮತ್ತು ಪ್ರಚಾರಕ್ಕಾಗಿ ಅನುದಾನ ನೀಡಿತ್ತು‌. ಅದನ್ನು ಮೂಲ ಉದ್ದೇಶಕ್ಕೆ ಬಳಸದೆ ದುರ್ಬಳಕೆ ಮಾಡಿಕೊಂಡಿದೆ ಎನ್ನಲಾಗಿದೆ. ಕೆಲ ಶಿಕ್ಷಕರು ಮತ್ತು ಸಿಬ್ಬಂದಿ ತಮ್ಮ ಸ್ವಂತ ಅಕೌಂಟ್‌ಗೆ ಹಣ ಹಾಕಿಕೊಂಡ ಬಗ್ಗೆ ದಾಖಲೆಗಳು ಸಿಕ್ಕಿವೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಹಿಂದಿ ಪ್ರಚಾರ ಸಭಾ ಅಧ್ಯಕ್ಷ ಈರೇಶ ಅಂಚಟಗೇರಿ, “ದಕ್ಚಿಣ ಭಾರತ ಸಭಾದಲ್ಲಿ ಕಳೆದ 2004 ರಿಂದ 2020ರವರೆಗೆ ಆಡಳಿತ ಮಂಡಳಿಯಲ್ಲಿ ನಡೆದ ಅವ್ಯವಹಾರದ ಕುರಿತು ತನಿಖೆ ನಡೆಯುತ್ತಿದೆ. ಸರ್ಕಾರದ ಸುಮಾರು 22 ಕೋಟಿಗೂ ಅಧಿಕ ಹಣವನ್ನು ದುರ್ಬಳಕೆ ಮಾಡಿದ್ದಾರೆ ಎಂಬ ಆರೋಪವಿದೆ. ಯಾವ ಉದ್ದೇಶಕ್ಕಾಗಿ ಹಿಂದಿ ಸಭಾ ಆರಂಭವಾಗಿದೆಯೋ ಆ ಉದ್ದೇಶಕ್ಕೆ ಬಳಸದೆ ಇನ್ನಿತರ ಚಟುವಟಿಕೆಗಳಿಗೆ ಬಳಸಿದ್ದಕ್ಕಾಗಿ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕೆಂದು ಭಾರತ ಸರ್ಕಾರ ತೀರ್ಮಾನ ಮಾಡಿ ಅದನ್ನು ಸಿಬಿಐಗೆ ವಹಿಸಿದೆ”.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ