Breaking News

ಸಿಎಂ ಸಿದ್ದರಾಮಯ್ಯ ಭೇಟಿಯಾದ ಎಸ್​ಟಿ ಸೋಮಶೇಖರ್

Spread the love

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಜೊತೆ ವೇದಿಕೆ ಹಂಚಿಕೊಂಡು ರಾಜಕೀಯ ಚರ್ಚೆಯ ಕೇಂದ್ರ ಬಿಂದುವಾಗಿರುವ ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.

ಆಪರೇಷನ್ ಹಸ್ತದ ಚರ್ಚೆ ನಡುವೆ ಸೋಮಶೇಖರ್ ಅವರ ಈ ನಡೆ ಇದೀಗ ಸಾಕಷ್ಟು ಕುತೂಹಲ ಮೂಡಿಸಿದೆ.

ಮಾಜಿ ಸಚಿವ ಹಾಗೂ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕುಮಾರಪಾರ್ಕ್ ಈಸ್ಟ್​​ನಲ್ಲಿರುವ ಸಿಎಂ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಸೋಮಶೇಖರ್​ ತಮ್ಮ ಕ್ಷೇತ್ರದ ಅಭಿವೃದ್ಧಿ ವಿಷಯದ ಬಗ್ಗೆ ಚರ್ಚೆ ನಡೆಸಿದರು. ಜೊತೆಗೆ ಕಾಮಗಾರಿಗಳು, ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಸಿಎಂಗೆ ಮನವಿ ಪತ್ರ ಸಲ್ಲಿಸಿದರು. ‘ಇದು ರಾಜಕೀಯ ಕಾರಣದ ಭೇಟಿಯಲ್ಲ, ಕೇವಲ ಕ್ಷೇತ್ರದ ಅಭಿವೃದ್ಧಿ ವಿಚಾರಕ್ಕೆ ಸೀಮಿತವಾದ ಭೇಟಿ ಎಂದು ಎಸ್​ ಟಿ ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ