Breaking News

ಕಾಂಗ್ರೆಸ್​ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿ ನೀಡಿ ಸಿಎಂ ಸಿದ್ದರಾಮಯ್ಯ ಗೌರವಿಸಿದರು.

Spread the love

ಬೆಂಗಳೂರು: ದೇವರಾಜ ಅರಸು ಅವರ ಕಾರ್ಯಕ್ರಮಗಳ ಅನುಕೂಲ ಪಡೆದ ಫಲಾನುಭವಿಗಳು ಮತ್ತು ಅವರ ಮಕ್ಕಳು ಶಾಶ್ವತವಾಗಿ ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯುವ ಸಮೂಹಕ್ಕೆ ಕರೆ ನೀಡಿದ್ದಾರೆ.

ದೇವರಾಜ ಅರಸ ಅವರು ಜಾರಿಗೆ ತಂದಿದ್ದು, ಕಾಗೋಡು ತಿಮ್ಮಪ್ಪನವರು ಹೋರಾಟ ಮಾಡಿದ್ದು, ಉಳುವವನೇ ಭೂಮಿ ಒಡೆಯ ಆಗಬೇಕು ಎನ್ನುವುದಾಗಿತ್ತು. ಆದರೆ, ಈಗ ಬಿಜೆಪಿ ಬಂದ ಮೇಲೆ “ಉಳ್ಳವನೇ ಭೂಮಿ ಒಡೆಯ” ಎನ್ನುವಂತಾಗಿದೆ ಎಂದು ಟೀಕಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಹಮ್ಮಿಕೊಂಡಿದ್ದ ದೇವರಾಜು ಅರಸು ಅವರ 108 ನೇ ಜನ್ಮ ದಿನಾಚರಣೆ ಹಾಗೂ ಡಿ. ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿ ನೀಡಿ ಗೌರವಿಸಿದರು.

 ಡಿ. ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯನಂತರ ಮಾತನಾಡಿದ ಸಿಎಂ, ಸಮಾಜವಾದಿ ಚಳವಳಿ ಮತ್ತು ಗೇಣಿ ಹೋರಾಟಗಾರ ಕಾಗೋಡು ತಿಮ್ಮಪ್ಪ ಅವರಿಗೆ ದೇವರಾಜು ಅರಸು ಪ್ರಶಸ್ತಿ ಲಭಿಸಿರುವುದರಿಂದ ಪ್ರಶಸ್ತಿಯ ಮೌಲ್ಯ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ನಾನು ಮುಖ್ಯಮಂತ್ರಿ ಆಗಿರುವ ಅವಧಿಯಲ್ಲೇ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿ ಲಭಿಸಿರುವುದು ನನಗೆ ಅತ್ಯಂತ ಖುಷಿಯಾಗಿದೆ. ಬಹಳಷ್ಟು ಯುವ ನಾಯಕರನ್ನು ಕಾಗೋಡು ತಿಮ್ಮಪ್ಪ ಬೆಳೆಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.


Spread the love

About Laxminews 24x7

Check Also

ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

Spread the love ಹುಣಸೂರು: ರಾಜ್ಯಾದ್ಯಂತ ದಿನೇ ದಿನೇ ಹೆಚ್ಚುತ್ತಿರುವ ಡೆಂಗ್ಯೂ ಮಹಾಮಾರಿಗೆ ಹುಣಸೂರು ತಾಲೂಕಿನ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯಾಧಿಕಾರಿಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ