Breaking News

ಬೊಕ್ಕಸದ ದುಡ್ಡು ಎಲ್ಲಿ ಹೋಯ್ತು..? : ಸಿದ್ದು

Spread the love

ಬೆಂಗಳೂರು, ನ.2- ನೆರೆ ಪೀಡಿತ ಜನರಿಗೆ ಪರಿಹಾರ ನೀಡಲು ದುಡ್ಡಿಲ್ಲ, ಕೊರೊನಾ ಚಿಕಿತ್ಸೆಗೂ ಹಣವಿಲ್ಲ ಎಂದು ಹೇಳಲಾಗುತ್ತಿದೆ. ಬೋಕ್ಕಸ ಮಾತ್ರ ಖಾಲಿಯಾಗಿದೆ. ಹಾಗಿದ್ದರೆ ಹಣ ಎಲ್ಲಾ ಎಲ್ಲಿ ಹೋಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ವಿವಿಧ ಪತ್ರಿಕೆಗಳಲ್ಲಿ ವರ್ಷದಿಂದ ನೆರೆ ಸಂತ್ರಸ್ಥರಿಗೆ ಪರಿಹಾರ ಪಾವತಿಸಿಲ್ಲ ಎಂಬ ವರದಿಯನ್ನು ಟ್ಯಾಗ್ ಮಾಡಿ ಪ್ರಶ್ನೆ ಕೇಳಿರುವ ಸಿದ್ದರಾಮಯ್ಯ, ಉತ್ತರ ಕೊಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.ಪ್ರವಾಹ ಪೀಡಿತ ರೈತರಿಗೆ ಪರಿಹಾರ ನೀಡಲೂ ದುಡ್ಡಿಲ್ಲ. ಕೊರೊನಾ ಚಿಕಿತ್ಸೆಗೆ ದುಡ್ಡಿಲ್ಲ, ಬೊಕ್ಕಸ ಮಾತ್ರ ಖಾಲಿಯಾಗಿದೆ ಎಂದು ರಾಜ್ಯ ಸರ್ಕಾರ 90,000 ಕೋಟಿ ರೂಪಾಯಿ ಸಾಲ ಮಾಡಲು ಹೊರಟಿದೆ. ಹಾಗಿದ್ದರೆ ಬೋಕ್ಕಸದಲ್ಲಿನ ದುಡ್ಡು ಎಲ್ಲಿಗೆ ಹೋಯಿತು? ಮುಖ್ಯಮಂತ್ರಿಗಳು ಮತ್ತು ಸಚಿವರ ಜೇಬಿಗೆ ಹೋಗಿದೆಯೇ ಎಂದು ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ: ಬೈರತಿ ಸುರೇಶ್

Spread the loveಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳಲ್ಲಿ  ಡಿಜಿಟಲ್ ಪೇಮೆಂಟ್  ಜಾರಿ ಮಾಡಲು ಕ್ರಮವಹಿಸುತ್ತೇವೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ