Home / ರಾಜಕೀಯ / ಕೌಜಲಗಿ ಜಿಪಂ ವ್ಯಾಪ್ತಿಯ ನೂತನ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರು ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಸತ್ಕಾರ ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ

ಕೌಜಲಗಿ ಜಿಪಂ ವ್ಯಾಪ್ತಿಯ ನೂತನ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರು ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಸತ್ಕಾರ ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ

Spread the love

ಕೌಜಲಗಿ ಜಿಪಂ ವ್ಯಾಪ್ತಿಯ ನೂತನ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರು ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಸತ್ಕಾರ ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಕೌಜಲಗಿಯ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ಸದ್ಬಳಕೆ ಮಾಡಲಾಗುವುದು. ಈ ಮೂಲಕ ಕೌಜಲಗಿ ಗ್ರಾಮಸ್ಥರ ಅಹವಾಲುಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ರವಿವಾರದಂದು ಕೌಜಲಗಿಯ ವಿಠ್ಠಲ-ಬೀರದೇವರ ದೇವಸ್ಥಾನದ ಆವರಣದಲ್ಲಿ ಕೌಜಲಗಿ ಜಿಲ್ಲಾ ಪಂಚಾಯತ ಕ್ಷೇತ್ರದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ ಭಾಗದಿಂದ ಅತ್ಯಧಿಕ ಮತಗಳ ಮುನ್ನಡೆ ನೀಡಿದ್ದಕ್ಕಾಗಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು.

ರಸ್ತೆಗಳ ಸುಧಾರಣೆ, ಒಳಚರಂಡಿ ನಿರ್ಮಾಣ, ಕುಡಿಯುವ ನೀರು, ಆಸ್ಪತ್ರೆ ಸೇರಿದಂತೆ ಜನರ ಮೂಲ ಸೌಕರ್ಯಗಳಿಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು. ಚುನಾವಣೆಯಲ್ಲಿ ಜನತೆಗೆ ನೀಡಿರುವ ಆಶ್ವಾಸನೆಗಳನ್ನು ಮುಂದಿನ ದಿನಗಳಲ್ಲಿ ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಕೌಜಲಗಿ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ರಚಿಸುವ ಕುರಿತಂತೆ ಈ ಭಾಗದ ಸಾರ್ವಜನಿಕರು ಪ್ರತಿ ಬಾರಿ ಒತ್ತಾಯಿಸುತ್ತಲೇ ಬರುತ್ತಿದ್ದಾರೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಗೋಕಾಕ ತಾಲೂಕಿನ ಕೌಜಲಗಿ ತಾಲೂಕು ಕೇಂದ್ರವಾಗುವುದು ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ನಾನು ಕೂಡ ನಿಮ್ಮ ಚಾಲನಾ ಸಮಿತಿ ಹೋರಾಟಗಾರರೊಂದಿಗೆ ಸದಾ ಇದ್ದುಕೊಂಡು ಹೋರಾಟಕ್ಕೆ ಬೆಂಬಲ ನೀಡುತ್ತೇನೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಮುಖಂಡರಾದ ಡಾ.ರಾಜೇಂದ್ರ ಸಣ್ಣಕ್ಕಿ, ಎ.ಕೆ. ನಾಯಿಕ, ಸಣ್ಣಪ್ಪ ಭೋವಿ, ರವಿ ಪರುಶೆಟ್ಟಿ, ಪರಮೇಶ್ವರ ಹೊಸಮನಿ, ಮಹಾಂತೇಶ ಶಿವನಮಾರಿ, ಗಂಗಾಧರ ಲೋಕನ್ನವರ, ಬಸವರಾಜ ಲೋಕನ್ನವರ, ಶಿವಾನಂದ ಲೋಕನ್ನವರ, ಮಹೇಶ ಪಟ್ಟಣಶೆಟ್ಟಿ, ನಾರಾಯಣ ಮುತಾಲಿಕದೇಸಾಯಿ, ಸುಭಾಸ ಕೌಜಲಗಿ, ಅಶೋಕ ಉದ್ದಪ್ಪನವರ, ಗ್ರಾಪಂ ಅಧ್ಯಕ್ಷ ಶಿವಾನಂದ ಭಜಂತ್ರಿ, ಮಹಾದೇವ ಬುದ್ನಿ, ಎಂ.ಡಿ. ಖಾಜಿ, ಎಸ್.ಬಿ. ಹಳ್ಳೂರ, ಹಾಸೀಮಸಾಬ ನಗಾರ್ಚಿ, ರಾಯಪ್ಪ ಬಳೋಲದಾರ, ನೀಲಪ್ಪ ಕೇವಟಿ, ಸಿದ್ದಪ್ಪ ಡೋಣಿ, ಬಸಪ್ಪ ದಳವಾಯಿ, ಶಂಕರ ಜೋತೆನ್ನವರ, ಶಾಂತಪ್ಪ ಹಿರೇಮೇತ್ರಿ, ಡಿ.ಜೆ. ಮುಲ್ತಾನಿ, ಅಲ್ಲಾಭಕ್ಷ ಹುನ್ನೂರ, ಜಾಕೀರ ಜಮಾದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕೌಜಲಗಿ ಜಿಲ್ಲಾ ಪಂಚಾಯತ ಕ್ಷೇತ್ರದ ವಿವಿಧ ಗ್ರಾಮ ಪಂಚಾಯತಿಗಳ ನೂತನ ಅಧ್ಯಕ್ಷ-ಉಪಾಧ್ಯಕ್ಷರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಜಾತ್ರಾ ಕಮೀಟಿಗಳ ಪ್ರಮುಖರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಸತ್ಕರಿಸಿದರು.
ನಂತರ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೌಜಲಗಿ ಜಿಲ್ಲಾ ಪಂಚಾಯತ ಕ್ಷೇತ್ರದ ವಿವಿಧ ಗ್ರಾಮಗಳ ಸಾರ್ವಜನಿಕರ ಕುಂದುಕೊರತೆಗಳನ್ನು ಸ್ವೀಕರಿಸಿದರು.


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ