Breaking News

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಜನರ ಹಿತ ಕಾಯಲಿ,: ಬೊಮ್ಮಾಯಿ

Spread the love

ಬೆಂಗಳೂರು: “ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರ್ಕಾರ ರಾಜ್ಯದ ಜನರು ಹಾಗೂ ರೈತರ ಹಿತ ಕಾಪಾಡಲಿ, ನಾವು ಅವರಿಗೆ ಸಹಕಾರ ನೀಡುತ್ತೇವೆ” ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ಹೊಸ ಪೀಠ ರಚನೆ ಮಾಡಿದೆ. ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು” ಎಂದರು.

“ಈಗಾಗಲೇ ಟ್ರಿಬ್ಯುನಲ್ ಆದೇಶ ಬಂದು ಒಂದು ವ್ಯವಸ್ಥೆ ಇರುವ ಸಂದರ್ಭದಲ್ಲಿ ಈಗಿರುವ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಒಂದೆಡೆ ನೀರು ಬಿಡುತ್ತದೆ ಮತ್ತೊಂದೆಡೆ ವಾದ ಮಾಡುತ್ತಾರೆ. ಸುಪ್ರೀಂ ಕೋರ್ಟ್​ನಲ್ಲಿ ಕಾನೂನಾತ್ಮಕವಾಗಿ ಹೋರಾಟ ಮಾಡಲು ಪ್ರಯತ್ನ ಮಾಡಬೇಕು‌. ನಾವು ವಿರೋಧ ಪಕ್ಷವಾಗಿ ಎಲ್ಲ ರೀತಿಯ ಸಹಕಾರ ನೀಡಲು ಸಿದ್ದರಿದ್ದೇವೆ. ಮಂಡ್ಯ, ಮೈಸೂರು ಭಾಗದ ರೈತರು ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ. ಇಡೀ ವರ್ಷ ನೀರಿನ ಕೊರತೆ ನಿರ್ವಹಣೆ ಮಾಡಬೇಕಿದೆ. ರಾಜ್ಯದ ರೈತರ ಕೂಗಿಗೆ ಸ್ಪಂದಿಸುವ ಕೆಲಸ ಮಾಡಬೇಕು” ಎಂದು ಹೇಳಿದರು.

ಬಿಜೆಪಿ, ಜೆಡಿಎಸ್‌ನವರಿಗೆ ಉತ್ತರ ಕೊಡಬೇಕಿಲ್ಲ ಎಂಬ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, “ನೀರಾವರಿ ಸಚಿವರಾದ ಡಿ‌.ಕೆ.ಶಿವಕುಮಾರ್ ಅವರು, ರಾಜ್ಯದ ಜನತೆಗೆ, ರೈತರಿಗೆ, ಬೆಂಗಳೂರಿನ ಜನತೆಗೆ ಉತ್ತರ ಕೊಡಲಿ. ನಾವು ವಿರೋಧ ಪಕ್ಷವಾಗಿ ನಮ್ಮ ಅಭಿಪ್ರಾಯ ಹೇಳಿದ್ದೇವೆ. ರೈತರನ್ನು ಕೋರ್ಟ್​ಗೆ ಹೋಗಿ ಎಂದರೆ ಹೇಗೆ?. ಅವರು ರಾಜ್ಯದ ಜನರ ಹಿತ ಕಾಯಲಿ ನಾವು ಅವರಿಗೆ ಸಹಕಾರ ನೀಡುತ್ತೇವೆ” ಎಂದು ತಿಳಿಸಿದರು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ