Breaking News

ವರಮಹಾಲಕ್ಷ್ಮಿ ಹಬ್ಬ: ಸರ್ಕಾರದಿಂದ ಮಹಿಳೆಯರಿಗೆ ಅರಿಶಿನ, ಕುಂಕುಮ, ಬಳೆ ಉಡುಗೊರೆ

Spread the love

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ದೇವಾಲಯಗಳಲ್ಲಿ ಅರಿಶಿನ, ಕುಂಕುಮ ಮತ್ತು ಬಳೆಗಳನ್ನು ರಾಜ್ಯದ ಮಹಿಳೆಯರಿಗೆ ಉಡುಗೊರೆಯಾಗಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಆಗಸ್ಟ್ 25 ರಂದು ವರಮಹಾಲಕ್ಷ್ಮಿ ವ್ರತ ನಡೆಯಲಿದೆ. ಈ ದಿನದಂದು ಎಲ್ಲಾ ಅನುಸೂಚಿತ ದೇವಸ್ಥಾನಗಳಿಗೆ ಆಗಮಿಸುವ ಮಹಿಳೆಯರಿಗೆ ಅರಿಶಿನ, ಕುಂಕುಮ ಹಾಗೂ ಬಳೆಗಳನ್ನು ನೀಡಲಾಗುತ್ತದೆ.

 ರಾಜ್ಯ ಸರ್ಕಾರದ ಸುತ್ತೋಲೆಆಯಾ ದೇವಾಲಯಗಳ ವತಿಯಿಂದ ಉತ್ತಮ ಗುಣಮಟ್ಟದ ಕಸ್ತೂರಿ, ಅರಿಶಿನ, ಕುಂಕುಮ ಮತ್ತು ಹಸಿರು ಬಳೆಗಳನ್ನು ತಂದು ದೇವರ ಮುಂದಿಟ್ಟು ಪೂಜಿಸಿ ಗೌರವದಿಂದ ಮಹಿಳೆಯರಿಗೆ ನೀಡುವುದಾಗಿ ಹಾಗೂ ಅದರ ವೆಚ್ಚವನ್ನು ಆಯಾ ದೇವಸ್ಥಾನದಿಂದ ನಿಯಮಾನುಸಾರವೇ ಭರಿಸಲು ಆದೇಶಿಸಲಾಗಿದೆ. ಪ್ರಸಾದ ರೂಪವಾಗಿ ಅರಿಶಿನ, ಕುಂಕುಮವನ್ನು ಕಾಗದದ ಲಕೋಟೆಗಳಲ್ಲಿ ಸರ್ಕಾರದ ಲಾಂಛನದೊಂದಿಗೆ ದೇವಾಲಯದ ಹೆಸರು ಮುದ್ರಿಸಿ ಲಕೋಟೆ ತಯಾರಿಸಿಕೊಂಡು ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ನೀಡಲು ಸೂಚಿಸಲಾಗಿದೆ.


Spread the love

About Laxminews 24x7

Check Also

ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕಾಮಗಾರಿ ಕೈಗೊಳ್ಳಿ :ಶಾಸಕ ರಾಜು ಶೆಠ್

Spread the love ಫ್ಲೈಓವರ್ ಕಾಮಗಾರಿಗೆ ಸಂಬಂಧಿಸಿದ ಪ್ರಮುಖ ಪ್ರದೇಶಗಳ ಪರಿಶೀಲನೆ ನಾಗರಿಕರ ಸುರಕ್ಷತೆ, ತುರ್ತು ಸೇವೆಗಳ ಪ್ರವೇಶ ಮಾರ್ಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ