ಹೈದರಾಬಾದ್: ತೆಲಂಗಾಣ ವಿಧಾನಸಭೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆಗೂ ಮೊದಲೇ ಮುಖ್ಯಮಂತ್ರಿ ಕೆ.ಚಂದ್ರಶೇಖರ್ರಾವ್ ಅವರು ಭಾರತ್ ರಾಷ್ಟ್ರ ಸಮಿತಿಯ (ಬಿಆರ್‌ಎಸ್) ಎಲ್ಲ 118 ಹುರಿಯಾಳುಗಳನ್ನು ಇಂದು (ಸೋಮವಾರ) ಘೋಷಿಸಿದರು.
ಸ್ವತಃ ಅವರು ಗಜ್ವೆಲ್ ಮತ್ತು ಕಾಮರೆಡ್ಡಿಯ ಎರಡು ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿದರೆ, ಪುತ್ರ, ಸಚಿವ ಕೆ.ಟಿ.ರಾಮರಾವ್ ಸಿರ್ಸಿಲ್ಲಾದಿಂದ ಕಣಕ್ಕಿಳಿಯಲಿದ್ದಾರೆ.
ಬಿಆರ್‌ಎಸ್ ಪಕ್ಷದ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ತೆಲಂಗಾಣ ವಿಧಾನಸಭೆಗೆ ಪೂರ್ವ ಸಿದ್ಧತೆ ನಡೆಸಿದ್ದು, 7 ಸ್ಥಾನಗಳಲ್ಲಿ ಬದಲಾವಣೆ ಮಾಡಿ ಉಳಿದಂತೆ ಹಾಲಿ ಶಾಸಕರನ್ನೇ ಅಖಾಡಕ್ಕಿಳಿಸಿದ್ದಾರೆ. ಪಕ್ಷದ ರಾಜ್ಯ ಪ್ರಧಾನ ಕಚೇರಿ ತೆಲಂಗಾಣ ಭವನದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದರು.

Laxmi News 24×7