Breaking News

ಚುನಾವಣೆ ಮುಹೂರ್ತಕ್ಕೂ ಮುನ್ನವೇ ಅಭ್ಯರ್ಥಿಗಳನ್ನು ಘೋಷಿಸಿದ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್​ರಾವ್​!

Spread the love

ಹೈದರಾಬಾದ್: ತೆಲಂಗಾಣ ವಿಧಾನಸಭೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆಗೂ ಮೊದಲೇ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ರಾವ್​ ಅವರು ಭಾರತ್ ರಾಷ್ಟ್ರ ಸಮಿತಿಯ (ಬಿಆರ್‌ಎಸ್) ಎಲ್ಲ 118 ಹುರಿಯಾಳುಗಳನ್ನು ಇಂದು (ಸೋಮವಾರ) ಘೋಷಿಸಿದರು.

ಸ್ವತಃ ಅವರು ಗಜ್ವೆಲ್ ಮತ್ತು ಕಾಮರೆಡ್ಡಿಯ ಎರಡು ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿದರೆ, ಪುತ್ರ, ಸಚಿವ ಕೆ.ಟಿ.ರಾಮರಾವ್​ ಸಿರ್ಸಿಲ್ಲಾದಿಂದ ಕಣಕ್ಕಿಳಿಯಲಿದ್ದಾರೆ.

ಬಿಆರ್​ಎಸ್​ ಪಕ್ಷದ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ತೆಲಂಗಾಣ ವಿಧಾನಸಭೆಗೆ ಪೂರ್ವ ಸಿದ್ಧತೆ ನಡೆಸಿದ್ದು, 7 ಸ್ಥಾನಗಳಲ್ಲಿ ಬದಲಾವಣೆ ಮಾಡಿ ಉಳಿದಂತೆ ಹಾಲಿ ಶಾಸಕರನ್ನೇ ಅಖಾಡಕ್ಕಿಳಿಸಿದ್ದಾರೆ. ಪಕ್ಷದ ರಾಜ್ಯ ಪ್ರಧಾನ ಕಚೇರಿ ತೆಲಂಗಾಣ ಭವನದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದರು.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ