Home / ರಾಜಕೀಯ / ಬೆಂಗಳೂರು: ವಿದ್ಯುತ್​ ಕಂಬ ಉರುಳಿಬಿದ್ದು ಕಾಲೇಜು ವಿದ್ಯಾರ್ಥಿನಿಗೆ ಗಂಭೀರ ಗಾಯ

ಬೆಂಗಳೂರು: ವಿದ್ಯುತ್​ ಕಂಬ ಉರುಳಿಬಿದ್ದು ಕಾಲೇಜು ವಿದ್ಯಾರ್ಥಿನಿಗೆ ಗಂಭೀರ ಗಾಯ

Spread the love

ಬೆಂಗಳೂರು : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ವಿದ್ಯುತ್​ ತಂತಿ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಸುದ್ದಗುಂಟೆ ಪಾಳ್ಯ ಪೊಲೀಸ್​ ಠಾಣಾ ವ್ಯಾಪ್ತಿಯ ಖಾಸಗಿ ಕಾಲೇಜು ಬಳಿ ಇಂದು ಮಧ್ಯಾಹ್ನ ನಡೆದಿದೆ.

ಘಟನೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಪ್ರಿಯಾ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿನಿ ಇಲ್ಲಿನ ಕಾಲೇಜಿನಿಂದ ಹಿಂತಿರುಗುವಾಗ ಅವಘಡ ಸಂಭವಿಸಿದೆ.

ನಗರದ ಸುದ್ದಗುಂಟೆ ಪಾಳ್ಯ ಪೊಲೀಸ್​ ಠಾಣಾ ವ್ಯಾಪ್ತಿಯ ಖಾಸಗಿ ಕಾಲೇಜಿನಿಂದ ಪ್ರಿಯಾ ವಾಪಸಾಗುತ್ತಿದ್ದಳು. ವಾಟರ್​ ಟ್ಯಾಂಕರ್​ನ ಚಕ್ರಕ್ಕೆ ವಿದ್ಯುತ್​ ಕಂಬದಲ್ಲಿದ್ದ ಟೆಲಿಫೋನ್​ ಕೇಬಲ್​ ಸಿಲುಕಿಕೊಂಡಿದೆ. ಗಮನಿಸದ ಟ್ಯಾಂಕರ್​ ಚಾಲಕ ವಾಹನ ಚಲಾಯಿಸಿದ್ದು, ವಿದ್ಯುತ್​ ಕಂಬ ನೆಲಕ್ಕೆ ಉರುಳಿಬಿದ್ದಿದೆ. ಆಗ ಅದೇ ದಾರಿಯಲ್ಲಿ ಬರುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಕಂಬದ ತಂತಿಗಳು ಬಿದ್ದಿವೆ. ಈ ವೇಳೆ ವಿದ್ಯುತ್​ ಪ್ರವಹಿಸಿರುವುದರಿಂದ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಆಕೆಯನ್ನು ಸಾಗರ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ವಿದ್ಯಾರ್ಥಿನಿಯ ಮುಖ ಮತ್ತು ದೇಹದ ಭಾಗಗಳಿಗೆ ಶೇ.40ರಷ್ಟು ಸುಟ್ಟ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಸಾಗರ್ ಆಸ್ಪತ್ರೆಯಿಂದ ಸೇಂಟ್​ ಜಾನ್ಸ್​ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ