Breaking News

ಬಗರ್​ ಹುಕುಂ ಭೂಮಿಗೆ ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಉಪ ತಹಶೀಲ್ದಾರ್​ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

Spread the love

ಶಿವಮೊಗ್ಗ: ಬಗರ್ ಹುಕುಂ ಭೂಮಿ ಖಾತೆ ವಿಷಯವಾಗಿ 40 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟು, ಹಣ ಪಡೆಯುವಾಗ ಶಿವಮೊಗ್ಗ ತಾಲೂಕು ಹೊಳಲೂರು ಗ್ರಾಮದ ನಾಡ ಕಚೇರಿಯ ಉಪ ತಹಶೀಲ್ದಾರ್ ಪರಮೇಶ್ ನಾಯ್ಕ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

 

ಎರಡು ಎಕರೆ ಬಗರ್ ಹುಕುಂ ಭೂಮಿ ಖಾತೆಗೆ ಸೇರಿಸಲು ಶಿವರಾಜ್​ ಎಂಬುವರಿಂದ 40 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಡಿವೈಎಸ್ಪಿ ಈಶ್ವರ ನಾಯಕ್ ಅವರು ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ. ಶಿವರಾಜ್ ಅಬ್ಬಲಗೆರೆ ನಿವಾಸಿಯಾಗಿದ್ದು, ಇವರು ಕ್ಯಾತನಕೊಪ್ಪ ಗ್ರಾಮದ ಬಳಿಯ ಎರಡು ಎಕರೆ ಬಗರ್ ಹುಕುಂ ಭೂಮಿ ಖಾತೆಗೆ ಸೇರಿಸುವಂತೆ ಬ್ರೋಕರ್ ಪ್ರಕಾಶ್ ಎಂಬುವರ ಮೂಲಕ ಉಪ ತಹಶೀಲ್ದಾರ್​ರೊಂದಿಗೆ ಮಾತನಾಡಿದ್ದರು.

ಖಾತೆ ಮಾಡಿಕೊಡಲು 40 ಸಾವಿರ ರೂ. ನೀಡಬೇಕೆಂದು ಮಾತುಕತೆ ಆಗಿತ್ತು. ಇಂದು 30 ಸಾವಿರ ರೂ. ನೀಡುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಉಪ ತಹಶೀಲ್ದಾರ್ ಜೊತೆಗೆ ಬ್ರೋಕರ್​ ಸಹ ಸಿಕ್ಕಿಬಿದ್ದಿದ್ದಾನೆ. ಹೊಳಲೂರು ನಾಡ ಕಚೇರಿಯಲ್ಲಿ ಈ ಹಿಂದೆ ಸಹ ಅಕ್ರಮವಾಗಿ ಬಗರ್ ಹುಕುಂ ಭೂಮಿಗೆ ಖಾತೆ ಮಾಡಿಸಿಡಲಾಗಿತ್ತು. ಇದಕ್ಕಾಗಿ ಲಕ್ಷಾಂತರ ರೂ. ಹಣ ಪಡೆದು‌ಕೊಂಡು ಅಕ್ರಮವಾಗಿ ಖಾತೆ ಮಾಡಿಸಿಕೊಟ್ಟಿದ್ದರು ಎಂಬ ಆರೋಪವಿತ್ತು.

ಬೆಂಗಳೂರಲ್ಲೂ ದಾಳಿ: ಕೆ ಆರ್ ಪುರಂ ತಾಲೂಕು ಕಚೇರಿ ಸರ್ವೆ ಸೂಪರ್​​ವೈಸರ್ ಕೆ ಟಿ ಶ್ರೀನಿವಾಸ್ ಮೂರ್ತಿ ಅವರ ಮನೆ ಮತ್ತು ಕಚೇರಿಗಳ ಮೇಲೂ ಇಂದು ದಾಳಿ ನಡೆದಿದೆ. ಕಲ್ಕೆರೆ ಬಳಿಯಿರುವ ಕೆ ಟಿ ಶ್ರೀನಿವಾಸ್ ನಿವಾಸ, ಹೆಣ್ಣೂರಿನಲ್ಲಿರುವ ಸಹೋದರಿ ನಿವಾಸ, ತುಮಕೂರಿನಲ್ಲಿರುವ ಸಹೋದರಿಯ ನಿವಾಸ, ಸೇರಿದಂತೆ ಸುಮಾರು 14 ಸ್ಥಳಗಳಲ್ಲಿ ಪರಿಶೀಲನೆ ಮುಂದುವರೆದಿದೆ.

ದಾಳಿ ವೇಳೆ ಅಂಧ್ರಳ್ಳಿಯಲ್ಲಿ ನಿವೇಶನ, ರಾಯಪುರದಲ್ಲಿ ಜಮೀನು, ಪತ್ನಿ ಹಾಗೂ ಸಹೋದರಿಯ ಸಹಭಾಗಿತ್ವದಲ್ಲಿ ಹೋಟೆಲ್ ಮತ್ತು ಬೋರ್ಡಿಂಗ್ಸ್, ಹೆಣ್ಣೂರು ಗ್ರಾಮದಲ್ಲಿ ನಿವೇಶನ, 5ಕ್ಕೂ ಅಧಿಕ ಅಬಕಾರಿ ಲೈಸೆನ್ಸ್, ಕೊತ್ತನೂರು ಗ್ರಾಮದಲ್ಲಿ ನಿವೇಶನ, ಲಕ್ಕೇನಹಳ್ಳಿಯಲ್ಲಿ ಮನೆ ಪತ್ತೆಯಾಗಿದೆ. ಇನ್ನೂ, ಆಗಸ್ಟ್​ 17 ರಂದು ರಾಜ್ಯದ ವಿವಿಧ ಜಿಲ್ಲೆಯ 14 ಸರ್ಕಾರಿ ಅಧಿಕಾರಿಗಳ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. 45ಕ್ಕೂ ಹೆಚ್ಚು ಕಡೆಗಳಲ್ಲಿ ನಡೆದ ದಾಳಿಯಲ್ಲಿ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ, ನಗದು ಪತ್ತೆಯಾಗಿತ್ತು


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ