Breaking News
Home / ರಾಜಕೀಯ / ಬಿಹಾರದಲ್ಲಿ ಎರಡನೇ ಹಂತದ ಮತದಾನ,ಕೊರೊನಾ ಸೋಂಕಿತರು ಹಕ್ಕು ಚಲಾಯಿಸಬಹುದು.

ಬಿಹಾರದಲ್ಲಿ ಎರಡನೇ ಹಂತದ ಮತದಾನ,ಕೊರೊನಾ ಸೋಂಕಿತರು ಹಕ್ಕು ಚಲಾಯಿಸಬಹುದು.

Spread the love

ನವದೆಹಲಿ : ಬಿಹಾರ ವಿಧಾನಸಭೆ ಚುನಾವಣೆ ನಿರ್ಣಾಯಕ ಘಟ್ಟ ತಲುಪಿದ್ದು ಇಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ದೇಶದ 10 ರಾಜ್ಯಗಳ 54 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಆರಂಭಗೊಂಡಿದ್ದು, ಮತದಾರರು ಮತಗಟ್ಟೆಯತ್ತ ಆಗಮಿಸುತ್ತಿದ್ದಾರೆ.

ಬಿಹಾರದ 17 ಜಿಲ್ಲೆಯ 94 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ. ಬಿಹಾರದಲ್ಲಿ ಮುಂದಿನ ಸರ್ಕಾರ ಯಾರದ್ದು ಅನ್ನೋದನ್ನ ಬಹುತೇಕ ಈ ಹಂತ ನಿರ್ಧರಿಸಲಿದ್ದು 2.86 ಕೋಟಿ ಮತದಾರರು 1463 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಸಂಜೆಯ 6 ಗಂಟೆಯ ತನಕ ಮತದಾನಕ್ಕೆ ಅವಕಾಶ ಕಲ್ಪಿಸಿದೆ.

ಕೊರೊನಾ ಕಾರಣದಿಂದಾಗಿ ಒಂದು ಗಂಟೆ ಮತದಾನದ ಸಮಯ ಹೆಚ್ಚಿಸಿದ್ದು ಕೊನೆಯ ಒಂದು ಗಂಟೆ ಅವಧಿಯಲ್ಲಿ ಕೊರೊನಾ ಸೋಂಕಿತರು ಹಕ್ಕು ಚಲಾಯಿಸಬಹುದು. ಇನ್ನು ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಮತಗಟ್ಟೆಗಳಲ್ಲಿ ಸಾಮಾಜಿಕ ಅಂತರ, ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ಬಳಕೆ ಕಡ್ಡಾಯವಾಗಿದೆ. 80 ವರ್ಷಕ್ಕೂ ಹೆಚ್ಚಿನವರಿಗೆ ಅಂಚೆ ಮತದಾನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಭದ್ರತೆ ಇನ್ನಷ್ಟು ಬಿಗಿಗೊಳಿಸಲಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ