Breaking News

ನಗರದಾದ್ಯಂತ ಕಳೆದ 24 ಗಂಟೆಯಲ್ಲಿ 15 ರಸ್ತೆ ಅಪಘಾತ, ಐವರ ಸಾವು

Spread the love

ಬೆಂಗಳೂರು: ನಗರದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಸಂಭವಿಸಿದ್ದು, ಹದಿನೈದು ಅಪಘಾತಗಳ ಪ್ರಕರಣಗಳು ಸಂಭವಿಸಿವೆ. ಈ ವೇಳೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ‌.

ಹೆಬ್ಬಾಳದಲ್ಲಿ – 1, ರಾಜಾಜಿನಗರ – 2, ಹೆಣ್ಣೂರು – 2, ಬಸವನಗುಡಿ – 2, ಕೆ.ಆರ್ ಪುರಂ – 1 ವೈಟ್ ಫೀಲ್ಡ್ – 2 ಹುಳಿಮಾವು – 2 ಹಾಗೂ ಸದಾಶಿವನಗರ – 1 ಮೈಕೊ ಲೇಔಟ್ – 1, ಎಲೆಕ್ಟ್ರಾನಿಕ್- 1 ಸೇರಿದಂತೆ ಒಟ್ಟು ಹದಿನೈದು ಅಪಘಾತಗಳು ನಡೆದಿವೆ.

ಅಪಘಾತ ಪ್ರಕರಣಗಳು ವರದಿಯಾಗುತ್ತಿರುವುದರ ಕುರಿತು ಪ್ರತಿಕ್ರಿಯಿಸಿದ ಸಂಚಾರ ವಿಭಾಗದ ಜಂಟಿ ಆಯುಕ್ತ ಎಂ ಎನ್ ಅನುಚೇತ್ ”ವಾರಾಂತ್ಯದಲ್ಲಿ ಮಾತ್ರವಲ್ಲದೇ ಇತರೇ ದಿನಗಳಲ್ಲೂ ಸಹ ಅಪಘಾತ ಪ್ರಕರಣಗಳು ವರದಿಯಾಗುತ್ತಿವೆ. ಹೆಚ್ಚಿನ ಸಂದರ್ಭದಲ್ಲಿ ಮದ್ಯಪಾನ ಮಾಡಿ ಚಾಲನೆ, ಹೆಲ್ಮೆಟ್ ಧರಿಸದಿರುವುದು, ಅಜಾಗರೂಕತೆಯಿಂದ ವಾಹನ ಚಾಲನೆ ಮಾಡುತ್ತಿರುವುದರಿಂದ ಅಪಘಾತಗಳಾಗಿವೆ ” ಎಂದು ತಿಳಿಸಿದರು.

ಮದ್ಯಪಾನ ಮಾಡಿ ವಾಹನ ಚಾಲನೆ ವಿರುದ್ಧದ ಕಾರ್ಯಾಚರಣೆ ನಿಂತಿಲ್ಲ: ಇದಲ್ಲದೇ ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ತಪಾಸಣೆ ಮಾಡಲಾಗುತ್ತಿರುವ ಬಗ್ಗೆ ಅವರು ಮಾಹಿತಿ ಹಂಚಿಕೊಂಡರು. ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ಮೊದಲು ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ತಪಾಸಣೆ ಮಾಡಲಾಗುತ್ತಿತ್ತು. ಆ ಸ್ಥಳಗಳು ಎಲ್ಲರಿಗೂ ತಿಳಿದಿತ್ತು. ಆದ್ದರಿಂದ ಈಗ ಮೊದಲಿನಂತೆ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ತಪಾಸಣೆ ಮಾಡದೇ ವಾರಕ್ಕೆ ಎರಡು ಬಾರಿ ಆಯಾ ಠಾಣಾ ವ್ಯಾಪ್ತಿಯಲ್ಲಿ ಸ್ಥಳ ನಿಗದಿಪಡಿಸಿಕೊಂಡು ಪರಿಣಾಮಕಾರಿಯಾಗಿ ತಪಾಸಣೆ ಮಾಡಲಾಗುತ್ತಿದೆ. ಈಗ ಆರೇಳು ತಿಂಗಳ ಪ್ರಕರಣಗಳನ್ನು ಪರಿಶೀಲಿಸಿದಾಗ ಕೇವಲ 4-5% ಮಾತ್ರ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿರುವ ಕೇಸ್​ಗಳು ದಾಖಲಾಗಿವೆ. ಆದ್ರೆ ಎಲ್ಲರೂ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿಲ್ಲ. ಇತ್ತೀಚಿಗೆ ಆಯಪ್ ಆಧಾರಿತ ಇ-ಟ್ಯಾಕ್ಸಿ ಬಳಕೆ, ಬಾಡಿಗೆ ಚಾಲಕರನ್ನು ಬಳಸುತ್ತಿರುವುದು ಕಂಡು ಬಂದಿದೆ ಎಂದು ಮಾಹಿತಿ ನೀಡಿದರು.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ