ಕಾವೇರಿ ನದಿ ನೀರು ಹಂಚಿಕೆ ವಿವಾದ: ವಿಧಾನಸೌಧದಲ್ಲಿ ಸರ್ವಪಕ್ಷ ಸಭೆ ಆರಂಭ

Spread the love

ಬೆಂಗಳೂರು: ಕಾವೇರಿ ನದಿ ನೀರು ವಿವಾದ ಕುರಿತು ಚರ್ಚಿಸಲು ಇಂದು(ಬುಧವಾರ) ಬೆಂಗಳೂರಿನ ವಿಧಾನಸೌಧದಲ್ಲಿ ಕರೆದಿದ್ದ ಸರ್ವಪಕ್ಷ ಸಭೆ ಆರಂಭವಾಗಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಎಚ್‌ಡಿ ಕುಮಾರಸ್ವಾಮಿ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಲೋಕಸಭೆ ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದಾರೆ.

 

ಮಳೆ ಕೊರತೆ ಇದ್ದರೂ ತನಗೆ ಬಾಕಿ ಇರುವ ನೀರನ್ನು ಬಿಡಬೇಕು ಎಂದು ಕೋರಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್​ ಮೊರೆ ಹೋಗಿರುವ ಕಾರಣ ರಾಜ್ಯ ಕಾಂಗ್ರೆಸ್​ ಸರ್ಕಾರ ನಾಡಿನ ರೈತರ ಮತ್ತು ತಮಿಳುನಾಡಿಗೆ ಬಿಡಬೇಕಾದ ನೀರಿನ ಬಗ್ಗೆ ಚರ್ಚೆ ನಡೆಸಲು ಸರ್ವ ಪಕ್ಷಗಳ ಸಭೆ ಕರೆದಿದೆ.

ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿರುವ ತಮಿಳುನಾಡು ತನ್ನ ಪಾಲಿನ ನೀರನ್ನು ಕರ್ನಾಟಕದಿಂದ ಹರಿಸಲು ನಿರ್ದೇಶಿಸಬೇಕು ಎಂದು ಅರ್ಜಿ ಸಲ್ಲಿಸಿದೆ. ಮನ್ನಿಸಿರುವ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್​ ಅವರ ಪೀಠ ವಿಚಾರಣೆಗೆ ಹೊಸ ಪೀಠ ರಚಿಸುವುದಾಗಿ ಹೇಳಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ