Breaking News

ಅಶುದ್ಧ ನೀರು ಸೇವನೆಯಿಂದ ಸಾವು ಮರುಕಳಿಸಿದರೆ ಜಿ.ಪಂ ಸಿಇಒ ಅಮಾನತು: ಸಿಎಂ ಎಚ್ಚರಿಕೆ

Spread the love

ಬೆಂಗಳೂರು: ಅಶುದ್ಧ ನೀರು ಕುಡಿದು ಸಾವನ್ನಪ್ಪುವ ಪ್ರಕರಣಗಳು ಭವಿಷ್ಯದಲ್ಲಿ ಮರುಕಳಿಸಿದರೆ ಜಿಲ್ಲಾ ಪಂಚಾಯಿತಿ ಸಿಇಒಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ಅಲ್ಲದೇ ನಗರ ಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ನೀರಿನ ಸಮಸ್ಯೆ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ (ಮಂಗಳವಾರ) ನಡೆದ ಸಭೆಯಲ್ಲಿ ಅವರು ಮಾತನಾಡಿದರು.

 ನೀರಿನ ಸಮಸ್ಯೆ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬಡವರು ವಾಸಿಸುವ ಕೊಳಗೇರಿಗಳಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಹಾಗೂ ಚರಂಡಿ ನೀರಿನ ಪೈಪ್​ಗಳು ಪ್ರತ್ಯೇಕವಾಗಿರುವುದನ್ನು ಖಾತ್ರಿ ಪಡಿಸಬೇಕು. ಪ್ರತ್ಯೇಕ ಇಲ್ಲದಿರುವ ಸ್ಥಳಗಳನ್ನು ಗುರುತಿಸಿ ರಾಜ್ಯದಲ್ಲಿ ಈ ಕುರಿತು ನೈರ್ಮಲ್ಯ ಅಭಿಯಾನ ಕೈಗೊಂಡು 15 ದಿನಗಳಲ್ಲಿ ಈ ಕುರಿತು ವರದಿ ಸಲ್ಲಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ರಾಜ್ಯದಲ್ಲಿ ಕಲುಷಿತ ನೀರಿನ ಸೇವನೆಯಿಂದಾಗಿ 13-14 ಜನ ಸಾವಿಗೀಡಾಗಿದ್ದಾರೆ. ಚಿತ್ರದುರ್ಗದಲ್ಲಿಯೇ 6-7 ಜನ ಅಸುನೀಗಿದ್ದಾರೆ. ತಪ್ಪಿಸಲು ಸಾಧ್ಯವಿದೆ. ಕೆಲವೆಡೆ ನಿರ್ವಹಣೆ ಇಲ್ಲದೇ ಇರುವುದರಿಂದ ಈ ರೀತಿ ಅವಘಡಗಳು ಸಂಭವಿಸುತ್ತದೆ. ಕಾವಾಡಿಗರ ಹಟ್ಟಿಯಲ್ಲಿ ಇತ್ತೀಚೆಗೆ ಒಬ್ಬರು ಮರಣ ಹೊಂದಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂಥ ಪ್ರಕರಣಗಳು ಸಂಭವಿಸುತ್ತದೆ. ಗ್ರಾಮೀಣಾಭಿವೃದ್ಧಿ, ಆರೋಗ್ಯ, ಪೌರಾಡಳಿತ ಹಾಗೂ ನಗರಾಭಿವೃದ್ಧಿ- ಈ ನಾಲ್ಕು ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಸಿಎಂ ಸೂಚಿಸಿದರು.

 ಸಿಎಂ ಭೇಟಿ ಮಾಡಿದ ಉಬುಂಟು ಮಹಿಳಾ ಉದ್ಯಮಿಗಳ ನಿಯೋಗ

ಹಾಸ್ಟೆಲ್​​ಗಳಲ್ಲಿಯೂ ವಿದ್ಯಾರ್ಥಿಗಳು ಕಲುಷಿತ ನೀರು ಕುಡಿದು ಆಸ್ಪತ್ರೆ ಸೇರಿದ್ದಾರೆ. ಈ ಬಗ್ಗೆ ಸಮರೋಪಾದಿಯಲ್ಲಿ ಕೆಲಸಗಳಾಗಬೇಕು. 39 ತಾಲೂಕುಗಳಲ್ಲಿ ಕುಡಿಯುವ ನೀರಿನ ಅಭಾವವಿದೆ. 121 ಹಳ್ಳಿಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇದಕ್ಕೆ 86 ಕೋಟಿ ರೂ.ಗಳ ಅನುದಾನ ಅಗತ್ಯವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವರು ಸಭೆಯ ಗಮನಕ್ಕೆ ತಂದರು.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ