Breaking News

ಸಾಫ್ಟ್ ಲ್ಯಾಂಡಿಂಗ್ ಯಶಸ್ವಿ: ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ, ಹೆಚ್​ಡಿಡಿ.. ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ

Spread the love

ಬೆಂಗಳೂರು : ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ರ ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾಗುತ್ತಿದ್ದಂತೆ ರಾಜ್ಯಾದ್ಯಂತ ಸಂಭ್ರಮಾಚರಣೆ ಮಾಡಲಾಗುತ್ತಿದೆ. ಹಲವರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸತೊಡಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್​ ಮಾಡಿ ಇಸ್ರೋಗೆ ಶುಭಾಶಯ ಕೋರಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿಯೂ ಚಂದ್ರಯಾನ-3ರ ವಿಜಯೋತ್ಸವ ಆಚರಿಸಲಾಯಿತು.

“ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲ ನೀಡಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3ರ ವಿಕ್ರಮ್​ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯನ್ನು ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ. ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ. ಇಂಥದ್ದೊಂದು ಅಸಾಧಾರಣ ಸಾಧನೆಗೈದ ನಾಡಿನ ವಿಜ್ಞಾನಿಗಳಿಗೆ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ : ಚಂದ್ರಯಾನ ಯಶಸ್ವಿಯಾದ ಹಿನ್ನೆಲೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಚಂದ್ರಯಾನ ಸಾಫ್ಟ್ ಲ್ಯಾಂಡಿಂಗ್ ವೀಕ್ಷಣೆಗೆ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದ ಮುಂಭಾಗದಲ್ಲಿ ಬೃಹತ್ ಪರದೆ ಅಳವಡಿಸಲಾಗಿತ್ತು. ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ರಾಜ್ಯಸಭಾ ಸದಸ್ಯ ಜಗ್ಗೇಶ್, ಶಾಸಕ ಅಶ್ವತ್ಥನಾರಾಯಣ್, ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಮಾಜಿ ಶಾಸಕ ಕುಡುಚಿ ರಾಜೀವ್, ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಸೇರಿ ಹಲವು ಮುಖಂಡರು ನೇರ ಪ್ರಸಾರದ ವೀಕ್ಷಣೆ ಮಾಡಿದರು. ಕಾರ್ಯಕರ್ತರು ತ್ರಿವರ್ಣ ಧ್ವಜ ಹಿಡಿದು ಭಾರತ ಮಾತೆಯ ಪರ ಜಯಘೋಷ ಮೊಳಗಿಸಿದರು.

ವಿಕ್ರಮ್​ ಲ್ಯಾಂಡರ್​ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿಂಗ್ ಆಗುತ್ತಿದ್ದಂತೆ ಬಿಜೆಪಿ ಕಚೇರಿ ಮುಂದೆ ಸಂಭ್ರಮ ಮುಗಿಲು ಮುಟ್ಟಿತ್ತು. ಮುಖಂಡರು, ಕಾರ್ಯಕರ್ತರು, ಚಿಣ್ಣರು ಇಸ್ರೋ ವಿಜ್ಞಾನಿಗಳಿಗೆ, ಪ್ರಧಾನಿ ಮೋದಿಗೆ ಜಯಘೋಷ ಹಾಕಿದರು. ಬಳಿಕ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ