Breaking News

ವಿದ್ಯುತ್‌ ಕಂಬಗಳ ಮೇಲಿನ ಅನಧಿಕೃತ ಕೇಬಲ್​ಗಳ ತೆರವಿಗೆ ಬೆಸ್ಕಾಂ ಒಂದು ವಾರದ ಗಡುವು

Spread the love

ಬೆಂಗಳೂರು : ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ ವಿದ್ಯುತ್‌ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಎಲ್ಲಾ ಒಎಫ್‌ಸಿ ಕೇಬಲ್‌, ಡೇಟಾ ಕೇಬಲ್‌ ಹಾಗೂ ಡಿಶ್ ಕೇಬಲ್‌ ಗಳನ್ನು ಒಂದು ವಾರದೊಳಗೆ ತೆರವುಗೊಳಿಸಲು ಸಂಬಂಧಿಸಿದ ಇಂಟರ್‌ ನೆಟ್‌ ಸೇವಾ ಕಂಪನಿಗಳು, ಟಿವಿ ಕೇಬಲ್‌ ಆಪರೇಟರ್‌ ಗಳಿಗೆ ಬೆಸ್ಕಾಂ ಕಟ್ಟುನಿಟ್ಟಿನ ಸೂಚನೆ ನೀಡಿದೆ.

 

ಬೆಸ್ಕಾಂ ವಿದ್ಯುತ್‌ ಕಂಬಗಳ ಮೇಲೆ ಅನಧಿಕೃತವಾಗಿ ಒಎಫ್‌ಸಿ ಕೇಬಲ್‌ ಹಾಗೂ ಇನ್ನಿತರ ಕೇಬಲ್‌ ಗಳನ್ನು ಅಳವಡಿಸಿದ್ದ ಪರಿಣಾಮ ವಿದ್ಯುತ್‌ ಕಂಬ ಉರುಳಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪಾದಚಾರಿಗಳು ಗಾಯಗೊಂಡಿದ್ದು, ಸುರಕ್ಷತೆ ದೃಷ್ಠಿಯಿಂದ ಬೆಸ್ಕಾಂ ಅನಧಿಕೃತ ಕೇಬಲ್​ಗಳನ್ನು ತೆರವುಗೊಳಿಸಲು ನಿರ್ಧರಿಸಿದೆ.

ಜೊತೆಗೆ ಒಎಫ್‌ಸಿ, ಇಂಟರ್‌ ನೆಟ್‌ ಡೇಟಾ ಕೇಬಲ್‌ ಹಾಗೂ ಡಿಶ್‌ ಕೇಬಲ್‌ ಗಳನ್ನು ಒಂದು ವಾರದೊಳಗೆ ತೆರವುಗೊಳಿಸಲು ಸಂಬಂಧಪಟ್ಟ ಇಂಟರ್‌ ನೆಟ್‌ ಕಂಪನಿಗಳು ಹಾಗೂ ಡಿಶ್‌ ಕೇಬಲ್‌ ಅಪರೇಟರ್​ಗಳು ತಪ್ಪಿದ್ದಲ್ಲಿ, ಬೆಸ್ಕಾಂ ಅವುಗಳನ್ನು ತೆರವುಗೊಳಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಬೆಸ್ಕಾಂ ಎಚ್ಚರಿಕೆ ರವಾನಿಸಿದೆ


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ