Breaking News

ಮುರುಘಾ ಮಠಕ್ಕೆ ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕ ಸಂಬಂಧ ಸಲ್ಲಿಕೆಯಾದ ಮೇಲ್ಮನವಿ ಅರ್ಜಿ ವಿಚಾರಣೆ ಮುಗಿಸಿರುವ ಹೈಕೋರ್ಟ್,

Spread the love

ಬೆಂಗಳೂರು: ಚಿತ್ರದುರ್ಗದ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠಕ್ಕೆ (ಎಸ್‌ಜೆಎಂ) ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿದ ಆದೇಶವನ್ನು ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಲಾದ ಮೇಲ್ಮನವಿ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ.

 

ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಏಳು ಮೇಲ್ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್. ಕಮಲ್ ಅವರಿದ್ದ ನ್ಯಾಯಪೀಠ ಸುಧೀರ್ಘ ವಿಚಾರಣೆ ನಡೆಸಿ ಅಂತಿಮ ತೀರ್ಪನ್ನು ಕಾಯ್ದಿರಿಸಿದೆ.

ಪ್ರಕರಣದ ಹಿನ್ನೆಲೆ: ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಪ್ರಕರಣದಲ್ಲಿ ಆರೋಪಿಯಾಗಿದ್ದು, ಚಿತ್ರದುರ್ಗದ ಪೊಲೀಸರು 2022ರ ಸೆಪ್ಟಂಬರ್ 1ರಂದು ಬಂಧಿಸಿದ್ದರು. ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ನಡುವೆ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್. ವಸ್ತ್ರದ ಅವರನ್ನು 2022ರ ಡಿಸೆಂಬರ್ 13ರಂದು ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿತ್ತು. ಅವರು 2022ರ ಡಿಸೆಂಬರ್ 15ರಂದು ಅಧಿಕಾರ ಸ್ವೀಕರಿಸಿದ್ದರು.

ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಮಠದ ತಾತ್ಕಾಲಿಕ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು, ಹೈಕೋರ್ಟ್ ಮೆಟ್ಟಿಲೇರಿದ್ದರು. ರಿಟ್ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಆಡಳಿತಾಧಿಕಾರಿ ನೇಮಕವನ್ನು ರದ್ದುಪಡಿಸಿ, ‘ಮಠಗಳಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು’ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ಸರ್ಕಾರದ ಆದೇಶವನ್ನು ರದ್ದುಪಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ದ್ವಿಸದಸ್ಯ ಪೀಠಕ್ಕೆ ಒಟ್ಟು 7 ಅರ್ಜಿಗಳು ಸಲ್ಲಿಕೆಯಾಗಿದ್ದವು.


Spread the love

About Laxminews 24x7

Check Also

ಮಹಾನ್ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ಮಹದಾಸೆಯಿಂದ ಸರ್ಕಾರಉರುಳಿಸಲು ಸಾವಿರ ಕೋಟಿ ತೆಗೆದಿಟ್ಟಿದ್ದಾರೆ: ಯತ್ನಾಳ

Spread the love ದಾವಣಗೆರೆ: ಮಹಾನ್ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ಮಹದಾಸೆಯಿಂದ ರಾಜ್ಯ ಸರ್ಕಾರವನ್ನು ಉರುಳಿಸಲು ಸಾವಿರ ಕೋಟಿ ತೆಗೆದಿಟ್ಟಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ