ಬೆಂಗಳೂರು, (ಆಗಸ್ಟ್ 18): ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಮುಗ್ಗರಿಸಿರುವ ಜೆಡಿಎಸ್ ಇದೀಗ ಮುಂಬರುವ ಲೋಕಸಭಾ ಚುನಾವಣೆ ಹಾಗೂ ಸ್ಥಳೀಯ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ತಯಾರಿ ನಡೆಸಿದೆ. ಹೀಗಾಗಿ ಪಕ್ಷವನ್ನು ಬಲಪಡಿಸಲು ಇಂದು ಜೆಡಿಎಸ್ ಕೋರ್ ಕಮಿಟಿ(jds core committee) ರಚನೆ ಮಾಡಲಾಗಿದೆ. ಒಟ್ಟು 21 ಜೆಡಿಎಸ್ (JDS) ನಾಯಕರನ್ನೊಳಗೊಂಡ ಕೋರ್ ಕಮಿಟಿಗೆ ಚಾಮುಂಡೇಶ್ವರಿ ಶಾಸಕ ಜಿಟಿ ದೇವೇಗೌಡ ಅವರು ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಜೆಡಿಎಸ್ ಕೋರ್ ಕಮಿಟಿ ಸಂಚಾಲಕರಾಗಿ ವೈಎಸ್ವಿ ದತ್ತಾ ಆಯ್ಕೆಯಾಗಿದ್ದಾರೆ. ಇನ್ನು ಸಾ.ರಾ.ಮಹೇಶ್, ಬಂಡೆಪ್ಪ ಕಾಶಂಪುರ, ಹೆಚ್.ಕೆ.ಕುಮಾರಸ್ವಾಮಿ, ವೆಂಕಟರಾವ್ ನಾಡಗೌಡ, ಸಿ.ಎಸ್.ಪುಟ್ಟರಾಜು, ಸುರೇಶ್ ಗೌಡ, ಆಲ್ಕೋಡ್ ಹನುಮಂತಪ್ಪ, ಬಿ.ಎಂ.ಫಾರೂಕ್, ರಾಜುಗೌಡ, ನೇಮಿರಾಜ್ ನಾಯ್ಕ್, ಎಂ.ಕೃಷ್ಣರೆಡ್ಡಿ, ದೊಡ್ಡಪ್ಪಗೌಡ S.ಪಾಟೀಲ್, ಕೆ.ಎಂ.ತಿಮ್ಮರಾಯಪ್ಪ, ವೀರಭದ್ರಪ್ಪ ಹಾಲರವಿ, ಪ್ರಸನ್ನ ಕುಮಾರ್, ಸುನಿತಾ ಚೌಹಾಣ್, ಸಿ.ವಿ.ಚಂದ್ರಶೇಖರ್, ಸುಧಾಕರ್ ಶೆಟ್ಟಿ, ಸೂರಜ್ ಸೋನಿ ನಾಯಕ್ JDS ಕೋರ್ ಕಮಿಟಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.