Breaking News

ಬ್ರಿಕ್ಸ್​ ಶೃಂಗ ಮುಗಿಸಿ ಅಥೆನ್ಸ್​​ಗೆ ಪ್ರಧಾನಿ… ಭರ್ಜರಿ ಸ್ವಾಗತ ಕೋರಲು ಗ್ರೀಸ್​ ಸನ್ನದ್ಧ

Spread the love

ಅಥೆನ್ಸ್( ಗ್ರೀಸ್​): ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಥೆನ್ಸ್‌ಗೆ ಭೇಟಿ ನೀಡಲಿದ್ದಾರೆ.

40 ವರ್ಷಗಳ ಬಳಿಕ ಭಾರತೀಯ ಪ್ರಧಾನಿಯೊಬ್ಬರು ಗ್ರೀಸ್‌ಗೆ ಮೊದಲ ಭೇಟಿ ನೀಡುತ್ತಿದ್ದಾರೆ. ಇದಕ್ಕಾಗಿ ಅಥೆನ್ಸ್​ನಲ್ಲಿ ಮೋದಿ ಸ್ವಾಗತಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ಯುರೋಪಿನ ಐತಿಹಾಸಿಕ ಭೂಮಿಗೆ ಇದು ನನ್ನ ಮೊದಲ ಭೇಟಿಯಾಗಿದೆ. 40 ವರ್ಷಗಳ ನಂತರ ಗ್ರೀಸ್‌ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಗೌರವ ನನಗೆ ದೊರೆತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.

 

 

ಗ್ರೀಸ್‌ಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಅಲ್ಲಿನ ಪ್ರಧಾನಿ ಮಿತ್ಸೋಟಾಕಿಸ್ ಅವರನ್ನು ಭೇಟಿ ಮಾಡಲಿದ್ದು, ಉಭಯ ದೇಶಗಳ ನಡುವಿನ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುವ ಸಂಬಂಧ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಪ್ರಧಾನಮಂತ್ರಿ ಮೋದಿಯವರು ಎರಡೂ ದೇಶಗಳ ನಡುವಣ ವ್ಯಾಪಾರ ವಹಿವಾಟುಗಳ ಬಗ್ಗೆ ಚರ್ಚಿಸಲಿದ್ದಾರೆ. ಅಷ್ಟೇ ಅಲ್ಲ ಗ್ರೀಸ್‌ನಲ್ಲಿರುವ ಭಾರತೀಯ ಸಮುದಾಯದೊಂದಿಗೆ ಪ್ರಧಾನಿ ಸಂವಾದ ನಡೆಸಲಿದ್ದಾರೆ.

 

 

ದಕ್ಷಿಣ ಆಫ್ರಿಕಾದಲ್ಲಿ ಬ್ರಿಕ್ಸ್ ಶೃಂಗಸಭೆ ಮುಕ್ತಾಯದ ನಂತರ ಪ್ರಧಾನಿ ಇಂದು ಅಥೆನ್ಸ್​​​ಗೆ ತೆರಳಲಿದ್ದಾರೆ. 1983 ರಲ್ಲಿ ಆಗಿನ ಪ್ರಧಾನಿ ಇಂದಿರಾ ಗಾಂಧಿ ಗ್ರೀಸ್‌ಗೆ ಭೇಟಿ ನೀಡಿದ್ದರು. ಇದು ಭಾರತದ ಪ್ರಧಾನಿಯೊಬ್ಬರು ಗ್ರೀಸ್​ಗೆ ಭೇಟಿ ನೀಡಿದ ಕೊನೆಯ ಪ್ರಧಾನಿ ಆಗಿದ್ದರು. 83 ರ ಬಳಿಕ ಈಗ ಪ್ರಧಾನಿ ಗ್ರೀಸ್​ ಪ್ರವಾಸ ಕೈಗೊಂಡಿದ್ದಾರೆ.

ಪ್ರಧಾನಿ ಸ್ವಾಗತಕ್ಕೆ ಭರ್ಜರಿ ಸಿದ್ಧತೆ: ಗ್ರೀಕ್​​ನಲ್ಲಿರುವ ಭಾರತೀಯ ಸಮುದಾಯ ಪ್ರಧಾನಿ ಸ್ವಾಗತಿಸಲು ಪೂರ್ವ ತಯಾರಿ ಮಾಡಿಕೊಂಡಿದೆ. ಗ್ರೀಕ್ ವಿದ್ಯಾರ್ಥಿಗಳು, ಬಾಲಿವುಡ್ ನೃತ್ಯ ಅಕಾಡೆಮಿಯಲ್ಲಿ ನೃತ್ಯಾಭ್ಯಾಸ ಮಾಡುತ್ತಿದ್ದಾರೆ. ಭಾರತೀಯ ಡಯಾಸ್ಪೊರಾ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಲು ಅವರು ತರಬೇತಿ ಪಡೆದು ಸಿದ್ಧರಾಗಿದ್ದಾರೆ. ಗ್ರೀಕ್ ಪ್ರಧಾನಿ ಕಿರಿಯಾಕೋಸ್ ಮಿತ್ಸೋಟಾಕಿಸ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಗ್ರೀಸ್‌ಗೆ ಭೇಟಿ ನೀಡುತ್ತಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ