Breaking News

ಹುಬ್ಬಳ್ಳಿ ಅಂಕೋಲಾ ರೈಲು ಯೋಜನೆ ಪ್ರಶ್ನಿಸಿ ಪರಿಸರವಾದಿಗಳು ಸಲ್ಲಿಸಿದ್ದ ಅರ್ಜಿ ವಿಲೇವಾರಿ

Spread the love

ಬೆಂಗಳೂರು: ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅಭಿಪ್ರಾಯದಂತೆ ಹುಬ್ಬಳ್ಳಿ – ಅಂಕೋಲಾ ರೈಲು ಮಾರ್ಗದ ಕುರಿತು ಪರಿಷ್ಕೃತ ಯೋಜನೆಯನ್ನು ಸಲ್ಲಿಸುವುದಾಗಿ ನೈಋತ್ಯ ರೈಲ್ವೆ ವಲಯ ಸಲ್ಲಿಸಿದ ಪ್ರಮಾಣ ಪರಿಗಣಿಸಿರುವ ಹೈಕೋರ್ಟ್, ಹುಬ್ಬಳ್ಳಿ – ಅಂಕೋಲಾ ನಡುವಿನ ಬ್ರಾಡ್ ಗೇಜ್ ರೈಲು ಮಾರ್ಗ ಯೋಜನೆಗೆ ಮುಂದಾಗಿದ್ದ ಕ್ರಮವನ್ನು ಪ್ರಶ್ನಿಸಿ ಪರಿಸರವಾದಿಗಳು ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡಿದೆ.

 

ಹುಬ್ಬಳ್ಳಿ- ಅಂಕೋಲಾ ನಡುವೆ 164.44 ಕಿ.ಮೀ ಉದ್ದದ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಇದಾಗಿದೆ. ಈ ಯೋಜನೆಗೆ ಕರ್ನಾಟಕ ವನ್ಯಜೀವಿ ಮಂಡಳಿ 2020ರ ಮಾರ್ಚ್​​ 20ರಂದು ಅನುಮತಿ ನೀಡಿರುವುದನ್ನು ಆಕ್ಷೇಪಿಸಿ ಪ್ರಾಜೆಕ್ಟ್ ವೃಕ್ಷ ಫೌಂಡೇಷನ್ ಮತ್ತು ಗಿರಿಧರ್ ಕುಲಕರ್ಣಿ ಎಂಬುವರು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ಎಂಜೆಎಸ್ ಕಮಲ್ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು.

ಈ ವೇಳೆ, ರೈಲ್ವೆ ಸಚಿವಾಲಯವನ್ನು ಪ್ರತಿನಿಧಿಸುವ ವಕೀಲರು, ನೈಋತ್ಯ ರೈಲ್ವೆ ವಲಯದ ಡೆಪ್ಯೂಟಿ ಚೀಫ್ ಎಂಜಿನಿಯರ್ ಸಿ.ಪಿ. ರೆಡ್ಡಿ ಪರವಾಗಿ ಪ್ರಮಾಣಪತ್ರ ಸಲ್ಲಿಸಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿ ಸಲ್ಲಿಸಿದೆ.

2020ರ ಮಾರ್ಚ್​ 20ರಂದು ರಾಜ್ಯ ವನ್ಯಜೀವಿ ಮಂಡಳಿ ಕೈಗೊಂಡಿರುವ ನಿರ್ಣಯ ಆಧರಿಸಿ ಹುಬ್ಬಳ್ಳಿ- ಅಂಕೋಲಾ ರೈಲು ಯೋಜನೆ ಸಂಬಂಧ ಮುಂದಿನ ಕ್ರಮ ಜರುಗಿಸಬಾರದು ಎಂದು ಸರ್ಕಾರಕ್ಕೆ ಸೂಚಿಸಿ 2020ರ ಜೂನ್​ 18ರಂದು ಹೈಕೋರ್ಟ್ ಮಧ್ಯಂತರ ಆದೇಶ ಮಾಡಿತ್ತು. ನಂತರ ಮಧ್ಯಂತರ ಆದೇಶವನ್ನು ಹೈಕೋರ್ಟ್ ವಿಸ್ತರಿಸುತ್ತ ಬಂದಿತ್ತು. ಇದೀಗ ಹೈಕೋರ್ಟ್ ಇತ್ಯರ್ಥಪಡಿಸಿದೆ.

 


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ