Breaking News

ಕಾವೇರಿ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್​ಸ್ಟೇಬಲ್​​ ಹೃದಯಾಘಾತದಿಂದ ಸಾವು

Spread the love

ಚಾಮರಾಜನಗರ : ಕಾವೇರಿ ನೀರು ಬಿಡುಗಡೆ ಸಂಬಂಧ ಕಾನೂನು‌ ಸುವ್ಯವಸ್ಥೆಗಾಗಿ ಕೊಳ್ಳೇಗಾಲಕ್ಕೆ ಬಂದಿದ್ದ ಕೆಎಸ್‌ಆರ್‌ಪಿ ಪೊಲೀಸ್ ಹೆಡ್ ಕಾನ್​ಸ್ಟೇಬಲ್​ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಇಂದು (ಶುಕ್ರವಾರ) ನಡೆದಿದೆ.

ಮೋಹನ್ (44) ಮೃತರು.

 ಪೊಲೀಸ್ ಹೆಡ್ ಕಾನ್​ಸ್ಟೇಬಲ್​ ಮೋಹನ್ ಸಂಬಂಧಿಕರುಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದ್ದು, ಈ ಸಂಬಂಧ ಗಲಭೆಗಳು ನಡೆಯದಂತೆ ಎಚ್ಚರ ವಹಿಸಲು ಮುನ್ನೆಚ್ಚರಿಕೆ ಕ್ರಮವಾಗಿ ಕೆಎಸ್‌ಆರ್‌ಪಿ ಮೈಸೂರು ಬೆಟಾಲಿಯನ್ 23 ಸಿಬ್ಬಂದಿ ಕೊಳ್ಳೇಗಾಲದಲ್ಲಿ ಕರ್ತವ್ಯಕ್ಕೆಂದು ಎರಡು ದಿನಗಳ ಹಿಂದೆ ಆಗಮಿಸಿ ಸಾರ್ವಜನಿಕರ ವಿದ್ಯಾರ್ಥಿ ನಿಲಯದಲ್ಲಿ ಉಳಿದುಕೊಂಡಿದ್ದರು. ಕರ್ತವ್ಯ ಮುಗಿಸಿಕೊಂಡು ಹಾಸ್ಟೆಲ್​ನಲ್ಲಿ ತಂಗಿದ್ದ ಹೆಡ್​​ ಕಾನ್​ಸ್ಟೇಬಲ್​ ಮೋಹನ್ ಅವರಿಗೆ ಹಠಾತ್ ಹೃದಯಾಘಾತವಾಗಿದೆ.

ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ವಾರಸುದಾರರಿಗೆ ಒಪ್ಪಿಸಲಾಗಿದೆ.‌ ಮೋಹನ್​ ಮಡಿಕೇರಿ ಜಿಲ್ಲೆಯ ನಾಪೋಕ್ಲು ಹೋಬಳಿಯ ಕಕ್ಕಬೇ ಗ್ರಾಮದವರು ಎಂದು ತಿಳಿದುಬಂದಿದೆ. ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸ್ ಕಾನ್​ಸ್ಟೇಬಲ್ ಸಾವು (ಇತ್ತೀಚಿನ ಘಟನೆಗಳು): ಪೊಲೀಸ್ ಕಾನ್​ಸ್ಟೇಬಲ್​​ವೊಬ್ಬರು ಹೃದಯಾಘಾತದಿಂದ ನಿಧನ ಹೊಂದಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ (ಆಗಸ್ಟ್​ -11-2023) ನಡೆದಿತ್ತು. ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ರಾತ್ರಿ ವೇಳೆ ಘಟನೆ ಜರುಗಿತ್ತು. ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದ ಬಸವನಗೌಡ ಮಾಲಿಪಾಟೀಲ್ ಆಗೋಲಿ (34) ಮೃತರೆಂದು ತಿಳಿದುಬಂದಿತ್ತು.

ಇವರು ಮಸ್ಕಿ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲಸ ಮುಗಿಸಿಕೊಂಡು ಮನೆಯಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿತ್ತು. ತಕ್ಷಣವೇ ಆಸ್ಪತ್ರೆಗೆ ರವಾನಿಸುತ್ತಿದ್ದಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದರು. ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಮೃತ ಕಾನ್​ಸ್ಟೇಬಲ್​ ಅಗಲಿದ್ದಾರೆ. ಸಕಲ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆಯನ್ನು ಸ್ವಗ್ರಾಮ ಆಗೋಲಿಯಲ್ಲಿ ನೆರವೇರಿಸಲಾಗಿತ್ತು. ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸಂತಾಪ ಸೂಚಿಸಿದ್ದರು. ಬಸವನಗೌಡ ಅವರಿಗೆ ಸಕ್ಕರೆ ಕಾಯಿಲೆ, ರಕ್ತದೊತ್ತಡ ಸೇರಿದಂತೆ ಹೃದಯ ಸಂಬಂಧಿತ ಯಾವುದೇ ಕಾಯಿಲೆ ಇರಲಿಲ್ಲ ಎಂದು ತಿಳಿದುಬಂದಿತ್ತು.

ಸಹಾಯಕ ಸಬ್‌ಇನ್ಸ್​ಪೆಕ್ಟರ್‌ ಹೃದಯಾಘಾತದಿಂದ ಸಾವು: ಕರ್ತವ್ಯನಿರತ ಎಎಸ್‌ಐ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿರಾ ಪೊಲೀಸ್ ಠಾಣೆಯಲ್ಲಿ (ಜುಲೈ 7-2023) ನಡೆದಿತ್ತು. ಶಿರಾ ಪೊಲೀಸ್ ಠಾಣೆಯಲ್ಲಿ ಸಹಾಯಕ ಸಬ್‌ಇನ್ಸ್‌ಪೆಕ್ಟರ್ ಆಗಿದ್ದ ಗಂಗಣ್ಣ (56) ಮೃತರು. ಗಂಗಣ್ಣ ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಮರಣೋತ್ತರ ಪರೀಕ್ಷೆ ಕರ್ತವ್ಯದಲ್ಲಿದ್ದರು. ಈ ವೇಳೆ ಹೃದಯಾಘಾತವಾಗಿದೆ. ಜೊತೆಯಲ್ಲಿದ್ದ ಪೊಲೀಸ್ ಸಿಬ್ಬಂದಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ತುಮಕೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಮಗಳನ್ನು ಟ್ಯೂಷನ್​ಗೆ ಬಿಡಲು ಹೋಗಿ ತಂದೆ ಸಾವು: ಮಗಳನ್ನು ಟ್ಯೂಷನ್‌ಗೆ ಬಿಡಲು ಬಂದಿದ್ದ ತಂದೆಗೆ ಹೃದಯಾಘಾತವಾಗಿ ರಸ್ತೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಹಾಸನ ನಗರದ ಸಾಲಗಾಮೆ ರಸ್ತೆಯಲ್ಲಿ (ಜುಲೈ 19-2023) ನಡೆದಿತ್ತು.


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ